Breaking News

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಆಲಗೂರು ಬಳಿ ಭೀಕರ ಸರಣಿ ಅಪಘಾತ

Spread the love

ಬಾಗಲಕೋಟೆ, ಫೆಬ್ರವರಿ 01: ಬಾಗಲಕೋಟೆ (Bagalkot) ಜಿಲ್ಲೆಯ ಜಮಖಂಡಿ (Jamakandi) ತಾಲೂಕಿನ ಆಲಗೂರು ಗ್ರಾಮದ ಬಳಿ ಸಂಭವಿಸಿದ ಸರಣಿ‌ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಮಹಾಂತೇಶ್ ಹೊನಕಟ್ಟಿ (35, ಬೆಳಗಾವಿ ಜಿಲ್ಲೆಯ ಅರಬಾವಿ ನಿವಾಸಿ ಭೀಮಪ್ಪ ಗಂಟೆಣ್ಣವರ (೪೨), ಜಮಖಂಡಿ ತಾಲ್ಲೂಕಿನ ಜಂಬಗಿ ಬಿಕೆ ಗ್ರಾಮದ ನಿವಾಸಿ ಆನಂದ ಬಾಡಗಿ (22) ಮೃತ ದುರ್ದೈವಿಗಳು.ನಸುಕಿನ ಜಾವ ಜಮಖಂಡಿ‌ಯಿಂದ ವಿಜಯಪುರಕ್ಕೆ ಟಾಟಾ ಏಸ್ ವಾಹನ ಹೊರಟಿತ್ತು.

ಕಾರು ವಿಜಯಪುರದಿಂದ ಜಮಖಂಡಿಗೆ ಬರುತ್ತಿತ್ತು. ಕಾರು ಜಾಗೂ ಟಾಟಾ ಏಸ್ ವಾಹನ ಪರಸ್ಪರ ಡಿಕ್ಕಿಯಾಗಿವೆ. ಟಾಟಾ ಏಸ್ ವಾಹನಕ್ಕೆ ಹಿಂಬದಿಯಿದ್ದ ಎರಡು ಬೈಕಗಳು ಡಿಕ್ಕಿ ಹೊಡೆದಿವೆ.

ಸ್ಥಳಕ್ಕೆ ಜಮಖಂಡಿ‌ ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸ್​​ಐ ಗಂಗಾಧರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಬಳ್ಳಾರಿಯಲ್ಲಿ ಹಕ್ಕಿಜ್ವರ ಭೀತಿ

Spread the loveಬಳ್ಳಾರಿ : ಜಿಲ್ಲೆಯಲ್ಲಿ ಹಕ್ಕಿಜ್ವರ ಪತ್ತೆ ಹಿನ್ನೆಲೆ ಜಿಲ್ಲಾಡಳಿತವು ಆಂಧ್ರ ಪ್ರದೇಶದಿಂದ ಬರುವ ಕೋಳಿ ಸಾಗಾಟ ವಾಹನಗಳ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ