ಬೆಂಗಳೂರು, (ಜನವರಿ 31): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ರಾಜ್ಯದಲ್ಲಿ ಹೋರಾಟದ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಮ್ ಈಗ ದೆಹಲಿ ಮಟ್ಟಕ್ಕೆ ಅದನ್ನು ಒಯ್ಯಲು ನಿರ್ಧರಿಸಿದೆ. ಜಿಲ್ಲಾಧ್ಯಕ್ಷರ ನೇಮಕಾತಿ ಪಾರದರ್ಶಕವಾಗಿಲ್ಲ ಎಂದು ವರಿಷ್ಠರ ಗಮನಕ್ಕೆ ತರಲು ಮುಂದಾಗಿದೆ.
ಹೌದು..ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಫರ್ಧೆ ಮಾಡುವ ವಿಚಾರದಲ್ಲಿ ಯತ್ನಾಳ್ ತಂಡ ಸನ್ನಿವೇಶವನ್ನು ಕಾದು ನೋಡಲು ನಿರ್ಧರಿಸಿದೆ.
ವರಿಷ್ಠರ ತೀರ್ಮಾನಕ್ಕೆ ಎರಡು ದಿನಗಳ ಕಾಲ ಕಾದು ನಂತರ ದೆಹಲಿಗೆ ಹೋಗಿ ಅಲ್ಲಿ ಕೂಡಾ ಸಭೆ ನಡೆಸುವ ಬಗ್ಗೆ ಬೆಂಗಳೂರಿನಲ್ಲಿ ಇಂದು (ಜನವರಿ 31) ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.ಬೆಂಗಳೂರಿನ ಸದಾಶಿವನಗರದಲ್ಲಿರೋ ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಯತ್ನಾಳ್ ಬಣ ಸಭೆ ಸೇರಿದ್ದು, ಸಭೆ ಮೂಲಕ ಮುಂದಿನ ಹೋರಾಟದ ಬಗ್ಗೆಯೂ ಚರ್ಚೆ ಮಾಡಲಾಯ್ತು. ಸಭೆಯಲ್ಲಿ ಶಾಸಕರಾದ ಯತ್ನಾಳ್,
ರಮೇಶ್ ಜಾರಕಿಹೊಳಿ, ಚಂದ್ರಪ್ಪ, ಬಿ.ಪಿ.ಹರೀಶ್, ಜಿ.ಎಂ.ಸಿದ್ದೇಶ್ವರ್, ಬಿ.ವಿ.ನಾಯಕ್ ಸೇರಿದಂತೆ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.
Laxmi News 24×7