ಧಾರವಾಡ: ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಕೋರ್ಟ್ ಆದೇಶದಂತೆ ವಿನಯ ಕುಲಕರ್ಣಿ ಡಿ. 21ರವರೆಗೆ ಜೈಲು ಗತಿಯಾಗಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಅವರನ್ನು ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿದೆ. ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆಯಲ್ಲಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.
Laxmi News 24×7