ಬೆಳಗಾವಿ : ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿನ ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಎಮ್ ಎಫ್ ಐ ಅವರಿಂದ ಸಾಲಗಾರರಿಗೆ ಕಿರುಕುಳ ಉಂಟಾಗುತ್ತಿರುವ ಬಗ್ಗೆ ಸ್ವೀಕೃತವಾಗುತ್ತಿರುವ ದೂರುಗಳ ಕುರಿತು ಸಭೆ ಜರುಗಿಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರವರು, ಬೆಳಗಾವಿ ನಗರದ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು, ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು ತಹಶೀಲ್ದಾರರು ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು ಹಾಜರಿದ್ದರು. ಮೈಕ್ರೋ ಫೈನಾನ್ಸ್ ಸಂಸ್ಥೆಯ ಕಡೆಯಿಂದ ಸಾರ್ವಜನಿಕರಿಗೆ ಹಾಗೂ ಸಾಲಗಾರರಿಗೆ ಅನಾವಶ್ಯಕವಾಗಿ ಕಿರುಕುಳ ಆಗದಂತೆ ಕ್ರಮವಹಿಸಲು ಎಲ್ಲಾ ತಹಶೀಲ್ದಾರರು ಹಾಗೂ ಸಿಪಿಐ ಗಳಿಗೆ ಸೂಚನೆ ನೀಡಲಾಯಿತು.