Breaking News

ಫೆ. 5 ರಿಂದ ಭದ್ರಾ ಜಲಾಶಯದಿಂದ ತುಂಗಾಭದ್ರಾ ನದಿಗೆ ನೀರು

Spread the love

ಶಿವಮೊಗ್ಗ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವರ 2024-25ನೇ ಸಾಲಿನ ಜಾತ್ರೆ ಮತ್ತು ಕಾರ್ಣಿಕೋತ್ಸವ ಇದೇ ತಿಂಗಳಲ್ಲಿ ಜರುಗಲಿದೆ. ಈ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಫೆಬ್ರವರಿ 5 ರಿಂದ 11ರ ವರೆಗೆ 5,800 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಲಾಗಿದೆ.

ಪ್ರಾದೇಶಿಕ ಆಯುಕ್ತರ ಆದೇಶದನ್ವಯ ಫೆಬ್ರವರಿ 5ರ ರಾತ್ರಿ 100 ಕ್ಯೂಸೆಕ್​ ಮತ್ತು ಫೆಬ್ರವರಿ 6 ರಿಂದ ಫೆಬ್ರವರಿ 11ರ ವರೆಗೆ ಪ್ರತಿದಿನ 800 ಕ್ಯೂಸೆಕ್​ನಂತೆ ಒಟ್ಟು 5,800 ಕ್ಯೂಸೆಕ್ ಪ್ರಮಾಣದ ನೀರನ್ನು ಭದ್ರಾ ನದಿಗೆ ಹರಿಸಲಾಗುತ್ತಿದೆ.ಮೇಲೆ ತಿಳಿಸಿದ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್ ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ನೀರಾವರಿ ನಿಗಮ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಆರ್. ರವಿಚಂದ್ರ ತಿಳಿಸಿದ್ದಾರೆ.


Spread the love

About Laxminews 24x7

Check Also

ಈಜಲು ತೆರಳಿದ್ದ ಇಬ್ಬರು ಸ್ನೇಹಿತರು ನೀರುಪಾಲಾದ ಘಟನೆ ದಾವಣಗೆರೆ ಜಿಲ್ಲೆಯ ಕುರ್ಕಿ ಗ್ರಾಮದ ಬಳಿಯ ಭದ್ರಾ ನಾಲೆಯಲ್ಲಿ ಸಂಭವಿಸಿದೆ.

Spread the loveದಾವಣಗೆರೆ: ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದ ಕೂಗಳತೆಯಲ್ಲಿ ಹರಿಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ