Breaking News

ಸಾಲ ತೀರಿಸಲಾಗದೆ ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ

Spread the love

ಮೈಸೂರು: ಸಾಲ ತೀರಿಸಲಾಗದೆ ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ತಾಲ್ಲೂಕಿನ ದಂಡಿಕೆರೆ ಗ್ರಾಮದಲ್ಲಿ ನಡೆದಿದೆ.

ನಂಜನಗೂಡು ತಾಲ್ಲೂಕಿನ ಮಲ್ಲೂಪುರ ಗ್ರಾಮದ ಸಿದ್ದೇಶ್ (40) ಮೃತ ವ್ಯಕ್ತಿ. ಆತ್ಮಹತ್ಯೆಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ ಸಿದ್ದೇಶ್​, ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

”ಪತ್ನಿ, ಮಕ್ಕಳು, ತಂದೆ, ತಾಯಿ ಸಹೋದರನಿಗೆ ಕ್ಷಮೆಯಾಚಿಸಿದ್ದಾರೆ. ತನ್ನ ಹೆಸರಿನಲ್ಲಿ ಸ್ನೇಹಿತನಿಗೆ ಬ್ಯಾಂಕ್ ಸಾಲ ನೀಡಿದ್ದೇನೆ. ಸ್ನೇಹಿತ ಮಣಿಕಂಠ ಎಂಬಾತನಿಗೆ ಖಾಸಗಿ ಬ್ಯಾಂಕ್​ನಲ್ಲಿ ಕಾರು ಕೊಳ್ಳಲು ಸಾಲ ಕೊಡಿಸಿದ್ದೆ.

ಜೊತೆಗೆ ತಮ್ಮ ಹೆಸರಿನಲ್ಲಿ ಎರಡು ಲಕ್ಷ ರೂ. ಕೈಸಾಲವನ್ನು ಕೂಡ ಕೊಡಿಸಿದ್ದೆ. ಕೇವಲ ಎರಡು ಕಂತು ಕಟ್ಟಿ ಸ್ನೇಹಿತ ಮಣಿಕಂಠ ಸುಮ್ಮನಾಗಿದ್ದ. ನಂತರ ಸಾಲ ತೀರಿಸದ ಕಾರಣ ಖಾಸಗಿ ಬ್ಯಾಂಕ್ ಸಿಬ್ಬಂದಿ ಸಾಲ ಕಟ್ಟುವಂತೆ ದೂರವಾಣಿ ಮೂಲಕ ಕರೆ ಮಾಡಿದ್ದರು. ಸಾಲ ತೀರಿಸದ ಸ್ನೇಹಿತನಿಂದ ಮನನೊಂದು” ಆತ್ಮಹತ್ಯೆಗೆ ಶರಣಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ವರುಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ರವಾನಿಸಿ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡ ಖಾನಾಪುರ ಪೊಲೀಸರು

Spread the loveಬೆಳಗಾವಿ: ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿ ಕಾರಿನಲ್ಲಿ ಖಾನಾಪುರದಿಂದ ಬೆಳಗಾವಿಯತ್ತ ಸಾಗಿಸುತ್ತಿದ್ದಾಗ ದಾಳಿ ಮಾಡಿರುವ ಖಾನಾಪುರ ಪೊಲೀಸರು ಓರ್ವನನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ