Breaking News

ಆಸ್ಪತ್ರೆ ಸೇರಿದ ಸೋನು ನಿಗಮ್

Spread the love

ಪ್ರಸಿದ್ಧ ಗಾಯಕ ಸೋನು ನಿಗಮ್ ಅವರಿಗೆ ಲೈವ್ ಪರ್ಫಾರ್ಮೆನ್ಸ್ ಸಮಯದಲ್ಲಿ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆ. ನೋವಿನ ಹೊರತಾಗಿಯೂ ಅವರು ಪ್ರದರ್ಶನ ಮುಂದುವರಿಸಿ, ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ತಮ್ಮ ಅನುಭವವನ್ನು ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಅವರ ಬೇಗನೆ ಚೇತರಿಸಿಕೊಳ್ಳುವಂತೆ ಆಶಿಸಿದ್ದಾರೆ.

ಭಾರತದ ಖ್ಯಾತ ಗಾಯಕರಲ್ಲಿ ಸೋನು ನಿಗಮ್ ಕೂಡ ಹೌದು. ಅವರು ಕನ್ನಡದ ಮಗ ಎನಿಸಿಕೊಂಡಿದ್ದಾರೆ. ‘ಕಳೆದ ಜನ್ಮದಲ್ಲಿ ನಾನು ಕನ್ನಡಿಗನಾಗಿದ್ದೆ ಎಂಬ ಭಾವನೆ ನನ್ನದು’ ಎಂದು ಕೂಡ ಅವರು ಹೇಳಿಕೊಂಡಿದ್ದು ಇದೆ. ಈಗ ಸೋನು ನಿಗಮ್ ಅವರಿಗೆ ತೀವ್ರ ಬೆನ್ನು ನೋವು ಕಾಣಿಸಿದೆ. ಲೈವ್ ಪರ್ಫಾರ್ಮೆನ್ಸ್ ವೇಳೆ ಈ ನೋವು ಹೆಚ್ಚಾಗಿದೆ. ಆದಾಗ್ಯೂ ಅದನ್ನು ತಡೆದಿಟ್ಟುಕೊಂಡು ಪರ್ಫಾರ್ಮೆನ್ಸ್ ಮುಂದುವರಿಸಿದ್ದಾರೆ. ಆ ಬಳಿಕ ಅವರು ಆಸ್ಪತ್ರೆ ಸೇರಿದ್ದಾರೆ. ಈ ಸಂದರ್ಭದ ವಿಡಿಯೋ ಹಂಚಿಕೊಂಡಿದ್ದಾರೆ.

 

Sonu Nigam: ಆಸ್ಪತ್ರೆ ಸೇರಿದ ಸೋನು ನಿಗಮ್; ಕಾನ್ಸರ್ಟ್ ನಡೆಯುವಾಗ ಆಗಿದ್ದೇನು?

ಸೋನು ನಿಗಮ್ ಅವರು ಆಸ್ಪತ್ರೆಯಲ್ಲಿ ಮಲಗಿದ್ದು, ಏನಾಯಿತು ಎಂಬುದನ್ನು ವಿವರಿಸಿದ್ದಾರೆ. ‘ನನ್ನ ಜೀವನದ ಅತ್ಯಂತ ಕಷ್ಟದ ದಿನ. ನಾನು ಹಾಡು ಹೇಳುತ್ತಾ, ವೇದಿಕೆ ಮೇಲೆಲ್ಲ ಓಡಾಡುತ್ತಾ ಇದ್ದೆ. ಆಗ ನೋವು ಕಾಣಿಸಿಕೊಂಡಿತು. ಆದರೆ, ಹೇಗೋ ಮ್ಯಾನೇಜ್ ಮಾಡಿದೆ. ಜನರು ನನ್ನಿಂದ ಎಷ್ಟನ್ನು ನಿರೀಕ್ಷಿಸುತ್ತಾರೋ ಅದಕ್ಕಿಂತ ಕಡಿಮೆ ಕೊಡಲು ನನಗೆ ಇಷ್ಟ ಇಲ್ಲ’ ಎಂದು ಅವರು ಹೇಳಿದ್ದಾರೆ.

‘ಅತಿಯಾದ ನೋವು ಕಾಣಿಸಿತ್ತು. ನನ್ನ ಬೆನ್ನು ಹುರಿಗೆ ಯಾರೋ ಇಂಜೆಕ್ಷನ್ ಸೂಜಿ ಇಟ್ಟಿದ್ದಾರೆ ಅನಿಸುತ್ತಿತ್ತು. ಸ್ವಲ್ಪ ಅಲ್ಲಾಡಿದರೂ ನೋವು ಕಿತ್ತು ಬರುತ್ತಿತ್ತು’ ಎಂದು ಅವರು ಹೇಳಿರೋ ಅವರು ವಿಡಿಯೋ ಕ್ಯಾಪ್ಶನ್​ನಲ್ಲಿ ‘ರಾತ್ರಿ ಸರಸ್ವತಿ ನನ್ನ ಕೈ ಹಿಡಿದರು’ ಎಂದಿದ್ದಾರೆ


Spread the love

About Laxminews 24x7

Check Also

ಇಡೀ ರಾಮನಗರ ಜಿಲ್ಲೆಯ ಚಿತ್ರಣ ಬದಲಿಸುತ್ತೇವೆ : ಡಿಸಿಎಂ ಡಿ ಕೆ

Spread the loveರಾಮನಗರ : ಮತದಾರರು ಈ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಶಕ್ತಿ ನೀಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ