Breaking News

ಬೆಂಗಳೂರಲ್ಲಿ ಆರ್​ಟಿಓ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ತೆರಿಗೆ ಪಾವತಿಸದ 30 ಐಷಾರಾಮಿ ಕಾರುಗಳು ಸೀಜ್‌

Spread the love

ಬೆಂಗಳೂರು, : ತೆರಿಗೆ (tax) ಪಾವತಿ ಮಾಡದೆ ಅನಧಿಕೃತವಾಗಿ ನಗರದಲ್ಲಿ ಸಂಚಾರ ಮಾಡುತ್ತಿದ್ದ ಫೆರಾರಿ, ಪೋರ್ಷೆ ಮತ್ತು ರೇಂಜ್ ರೋವರ್​ ಸೇರಿದಂತೆ 30 ಐಷಾರಾಮಿ ಸ್ಪೋರ್ಟ್ಸ್ ಕಾರುಗಳನ್ನು ಆರ್‌ಟಿಒ ಅಧಿಕಾರಿಗಳು ಸೋಮವಾರ ಸೀಜ್‌ ಮಾಡಿದ್ದಾರೆ. ಜಪ್ತಿಯಾದ ಕಾರುಗಳಿಂದ 3 ಕೋಟಿ ರೂ. ತೆರಿಗೆ ವಸೂಲಿ ಆಗಬೇಕಿದೆ.

ನಿನ್ನೆ ನಗರದಲ್ಲಿ ಕಾರ್ಯಚರಣೆ ಮಾಡಿದ ಆರ್‌ಟಿಒ ಅಧಿಕಾರಿಗಳು ಮಾಸೆರಾಟಿ, ಫೆರಾರಿ, ಪೋರ್ಷೆ, ರೇಂಜ್ ರೋವರ್, ಬಿಎಂಡಬ್ಲ್ಯು ಸೇರಿ 30 ಲಕ್ಸುರಿ ಕಾರುಗಳನ್ನು ಜಪ್ತಿ ಮಾಡಲಾಗಿದೆ. ದೆಹಲಿ, ಪುದುಚೇರಿ, ಮಹಾರಾಷ್ಟ್ರ, ಉತ್ತರ ಪ್ರದೇಶ, ಜಾರ್ಖಂಡ್ ಸೇರಿ ಹಲವು ರಾಜ್ಯಗಳಲ್ಲಿ ಐಷಾರಾಮಿ ಕಾರು ನೋಂದಣಿ ಮಾಡಿಸಿದ್ದರು. ಕರ್ನಾಟಕದಲ್ಲಿ ಅನಧಿಕೃತವಾಗಿ ಸಂಚಾರ ಮಾಡುತ್ತಿದ್ದ ಹಿನ್ನೆಲೆ ಸೀಜ್‌ ಮಾಡಲಾಗಿದೆ.ಬೆಂಗಳೂರಲ್ಲಿ ಆರ್‌ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ತೆರಿಗೆ ಪಾವತಿಸದ 30 ಐಷಾರಾಮಿ ಕಾರುಗಳು ಸೀಜ್‌

ಮಾಹಿತಿ ಪ್ರಕಾರ ಸಾರಿಗೆ ಉಪ ಆಯುಕ್ತ ಸಿ.ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಬಿ.ಶ್ರೀನಿವಾಸ್ ಪ್ರಸಾದ್, ದೀಪಕ್, ಶ್ರೀನಿವಾಸಪ್ಪ, ರಂಜಿತ್ ಸೇರಿದಂತೆ 41 ಅಧಿಕಾರಿಗಳ ತಂಡದಿಂದ ಕಾರ್ಯಾಚರಣೆ ಮಾಡಲಾಗಿದೆ.

ಜಪ್ತಿ ಮಾಡಲಾಗಿರುವ ಕಾರುಗಳು ರಾಜ್ಯದಲ್ಲಿ ತೆರಿಗೆ ಪಾವತಿಸದೆ ಸಂಚರಿಸುತ್ತಿದ್ದವು. ಸದ್ಯ ಸೀಜ್‌ ಆಗಿರುವ  ವಾಹನಗಳಿಂದ ಸುಮಾರು ಮೂರು ಕೋಟಿ ರೂಪಾಯಿ ತೆರಿಗೆ ವಸೂಲಿ ಮಾಡಲು ನೋಟಿಸ್ ನೀಡಲಾಗಿದೆ  ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ