Breaking News

ಬಾಲಕಿಯನ್ನು ಕರೆದ್ಯೊಯ್ದು ಸುಲೇಮಾನ್ ಅತ್ಯಾಚಾರ: ವಿಡಿಯೋ ಮಾಡಿದ ಅಲ್ತಾಫ್ ಅರೆಸ್ಟ್!

Spread the love

ಗದಗ, ): ಮಂಡ್ಯದಲ್ಲಿ 8 ವರ್ಷದ ಬಾಲಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಇಂದು (ಫೆಬ್ರವರಿ 03) ಗದಗನಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದ್ಯೊಯ್ದು ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಘಟನೆ ನಡೆದಿದ್ದು,  ಕಾಮಾಂಧರ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. 

ಅತ್ಯಾಚಾರಿ ಆರೋಪಿ ಸುಲೇಮಾನ್​ ಸೇರಿದಂತೆ ಅತ್ಯಾಚಾರ ಎಸಗುವುದನ್ನು ವಿಡಿಯೋ ಮಾಡಿದ್ದ ಅಲ್ತಾಫ್ ಎನ್ನುವಾತನನ್ನು ಸಹ ಪೊಲೀಸರು ಬಂಧಿಸಿದ್ದಾರೆ.ಸುಲೇಮಾನ್ ಎನ್ನುವಾತ ಅಪ್ರಾಪ್ತ ಬಾಲಕಿ ಕರೆದ್ಯೊಯ್ದು ಅತ್ಯಾಚಾರ ಎಸಗಿದ್ದಾನೆ. ಇನ್ನು ಅತ್ಯಾಚಾರ ಎಸಗಿದ ದೃಶ್ಯವನ್ನು ಅಲ್ತಾಫ್ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾನೆ.

ಇನ್ನು ಈ ಘಟನೆ  ಬಾಲಕಿ ಪಾಲಕರಿಗೆ ತಡವಾಗಿ ಗೋತ್ತಾಗಿದ್ದು, ಈ ಸಂಬಂಧ ಇಂದು(ಫೆಬ್ರವರಿ 03) ನರೇಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು, ಅತ್ಯಾಚಾರಿ ಆರೋಪಿ ಸುಲೇಮಾನ್ ಹಾಗೂ ವಿಡಿಯೋ ಮಾಡಿದ ಅಲ್ತಾಫ್ ನನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ