ಪ್ರಯಾಗ್ರಾಜ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರೂ ಬಾಯ್ಮುಚ್ಚಿಕೊಂಡು ಕೆಲಸ ಮಾಡಿ ಅಂತ ರಾಜ್ಯದ ಕಾಂಗ್ರೆಸ್ ನಾಯಕರನ್ನು ಗದರುವ ಬದಲು,
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ವಿಷಯದಲ್ಲಿ ಆಗಿರಬಹುದಾದ ಒಪ್ಪಂದದ ಬಗ್ಗೆ ಅಂತ ಹೇಳಿದ್ದರೆ ಇಂಥ ಉಪದ್ವ್ಯಾಪಗಳಿಗೆ ಅವಕಾಶವಿರುತ್ತಿರಲಿಲ್ಲ.
ಇಲ್ನೋಡಿ, ಬೆಳಗಾವಿಯ ಮೂರ್ನಾಲ್ಕು ಜನ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿ ನದಿತೀರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಫೋಟೋವೊಂದನ್ನು ಹಿಡಿದು ಮುಂದಿನ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಸಚಿವರ ಪರ ಅವರು ಹರಕೆ ಹೊತ್ತಿದ್ದಾರೆ ಎನ್ನಲಾಗುತ್ತಿದೆ.
Laxmi News 24×7