Breaking News

ಮೊಬೈಲ್ ತಂದಿಟ್ಟ ಅವಾಂತರ: ಓರ್ವ ಸಾವು 6 ಮಂದಿಗೆ ಶಿಕ್ಷೆ

Spread the love

ಹಾಸನ: ಎರಡು ವರ್ಷಗಳ ಹಿಂದೆ ಗಂಗಾಧರ ಎಂಬ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದ ಸಂಬಂಧ 6 ಮಂದಿಗೆ ನ್ಯಾಯಾಧೀಶರು ತಲಾ 6 ವರ್ಷಗಳ ಕಾಲ ಶಿಕ್ಷೆ ವಿಧಿಸುವ ಮೂಲಕ ವಿಶೇಷ ಪ್ರಕರಣಕ್ಕೆ ಇತಿಶ್ರೀ ಹಾಡಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗ್ರಾಮದ ಗಂಗಾಧರ್ (42) ಕೊಲೆಯಾದ ವ್ಯಕ್ತಿ. ಚನ್ನರಾಯಪಟ್ಟಣ ತಾಲೂಕು ಜನಿವಾರ ಗ್ರಾಮದ ಭರತ್ (34), ಅಭಿಷೇಕ್ ಅಲಿಯಾಸ್ ಕಬಾಬ್ ಅಭಿ (29), ಚಿರಂಜೀವಿ (27), ಅಭಿ ಅಲಿಯಾಸ್​ ರೆಬಲ್ ಅಭಿ (32), ಸೋಮಶೇಖರ್ ( 33), ಕುಮಾರ್ ಅಲಿಯಾಸ್​ ಕಳ್ಳ ಕುಮಾರ್ ಶಿಕ್ಷೆಗೊಳಗಾದ ಆರೋಪಿಗಳು.

ಏನಿದು ಪ್ರಕರಣ?: ಮೃತ ವ್ಯಕ್ತಿ ಗಂಗಾಧರ್ ವೃತ್ತಿಯಲ್ಲಿ ಟೈಲರ್. ಕಳೆದ 20 ವರ್ಷಗಳಿಂದ ಪಟ್ಟಣದ ಕೆ.ಆರ್.ವೃತ್ತದ ಬಳಿ ಎಂ.ಜಿ. ಟೈಲರ್ ಎಂಬ ಅಂಗಡಿ ಇಟ್ಟುಕೊಂಡಿದ್ದರು. ಎರಡೂವರೆ ವರ್ಷಗಳ ಹಿಂದೆ ಮೃತ ಗಂಗಾಧರ್ ಟೈಲರ್ ಅಂಗಡಿಯಲ್ಲಿ ಕೆಲಸ ಮಾಡುವಾಗ, ತಮ್ಮ ಮೊಬೈಲ್​ನಿಂದ ಗ್ರಾಹಕರೊಬ್ಬರಿಗೆ ಕರೆ ಮಾಡಲು ಹೋಗಿ ಒಂದು ನಂಬರ್ ತಪ್ಪಾಗಿ ಓರ್ವ ಮಹಿಳೆಗೆ ಡಯಲ್​ ಆಗಿತ್ತು.

 

6 accused convicted

ಆದರೆ, ಆ ಕರೆ ರಿಂಗ್ ಆದ ಬಳಿಕ ಕಟ್ ಮಾಡಿ, ಸರಿಯಾದ ನಂಬರ್​ಗೆ ಫೋನ್ ಮಾಡಿ ಮಾತನಾಡಿದ್ದರು. ಕೆಲ ಸಮಯದ ಬಳಿಕ ಅದೇ ನಂಬರ್​ನಿಂದ ಗಂಗಾಧರ್​ಗೆ ಫೋನ್ ಬಂದಿತ್ತು.

ಗಂಗಾಧರ್ “ಯಾರಿಗೋ ಕರೆ ಮಾಡಲು ಹೋಗಿ ಒಂದು ನಂಬರ್ ತಪ್ಪಾಗಿ ನಿಮಗೆ ಬಂತು” ಎಂದು ಕರೆ ಕಟ್​​ ಮಾಡಿದ್ದರು. ಆದರೆ ಆ ಮಹಿಳೆ ಮತ್ತೆ ಕರೆ ಮಾಡಿ “ನೀವು ಬೇಕು ಅಂತಲೆ ಕರೆ ಮಾಡಿದ್ದೀರಾ” ಎಂದು ಜೋರಾಗಿ ಮಾತಾನಾಡಲು ಪ್ರಾರಂಭಿಸಿದಾಗ, ಮೃತ ಗಂಗಾಧರ್ ಕೂಡ ಸ್ವಲ್ಪ ಜೋರಾಗಿ ಮಾತನಾಡಿದ್ದರು. ನಂತರ ಸಿಟ್ಟಿನಿಂದ ಆಕೆಗೆ ಬೈದು ಕರೆ ಕಟ್ ಮಾಡಿದ್ದರು. ಕೊನೆಗೆ ತನ್ನದಲ್ಲದ ತಪ್ಪಿಗೆ ಒಂದು ಮೆಸೇಜ್ ಮೂಲಕ ಕ್ಷಮೆಯನ್ನೂ ಕೇಳಿದ್ದರು.


Spread the love

About Laxminews 24x7

Check Also

ರೋರಿಂಗ್ ಸ್ಟಾರ್ ಶ್ರೀಮುರಳಿ ಸಿನಿಮಾಗೆ ಬಹುಬೇಡಿಕೆ ಸಂಗೀತ ನಿರ್ದೇಶಕ‌ ಎಂಟ್ರಿ…’ಪರಾಕ್’ಗೆ ಚರಣ್ ರಾಜ್ ಟ್ಯೂನ್.

Spread the loveಬೆಂಗಳೂರು: ಅರ್ಜುನ್ ಜನ್ಯ, ಹರಿಕೃಷ್ಣ ನಂತರ ಕನ್ನಡ ಚಿತ್ರರಂಗದ ಸಂಗೀತ ಲೋಕದಲ್ಲಿ ಹೊಸ ಅಲೆ ಎಬ್ಬಿಸುತ್ತಿರುವವರು ಚರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ