Breaking News

ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ ಆರೋಪ : ಫೈನಾನ್ಸ್ ಮ್ಯಾನೇಜರ್ ಬಂಧನ

Spread the love

ದಾವಣಗೆರೆ : ಸ್ನೇಹಿತರ ಹೆಸರಿನಲ್ಲಿ ಖಾತೆಗಳನ್ನು ತೆರೆದು ತಮ್ಮದೇ ಫೈನಾನ್ಸ್ ಕಂಪನಿಯಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು, ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪದಡಿ ಮ್ಯಾನೇಜರ್​ವೊಬ್ಬರನ್ನು ಜಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗಳೂರು ಪಟ್ಟಣದ ಕೆಎಲ್ಎಂ ಆ್ಯಕ್ಸಿವ್ ಫಿನ್ ವೆಸ್ಟ್ ಫೈನಾನ್ಸ್ ಕಂಪನಿಯ ವ್ಯವಸ್ಥಾಪಕ ಅರವಿಂದ ಹನುಮಂತ ಬಂಧಿತ ಆರೋಪಿ.‌

GOLD FRAUD CASE

 

ಬಂಧಿತ ಆರೋಪಿಯು ಫೈನಾನ್ಸ್ ಕಂಪನಿಯಲ್ಲಿ ಮ್ಯಾನೇಜರ್​ ಆಗಿ ಕಾರ್ಯನಿರ್ವಹಿಸುತ್ತಿದ್ದು, ಸ್ನೇಹಿತರ ಹೆಸರಿನಲ್ಲಿ ಖಾತೆಗಳನ್ನು ತೆರೆದು ನಕಲಿ ಬಂಗಾರದ ಆಭರಣಗಳನ್ನು ಅಡವಿಟ್ಟಿದ್ದರು. ಬಳಿಕ ಲಕ್ಷಾಂತರ ರೂಪಾಯಿ ಹಣವನ್ನು ಪಡೆದು ಕಂಪನಿಗೆ ವಂಚಿಸಿ ಪರಾರಿಯಾಗಿದ್ದನು. ಈ ಬಗ್ಗೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಅವರದ್ದೇ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಕೊಂಡು ಅರವಿಂದ ಹನುಮಂತನನ್ನು ಬಂಧಿಸಿರುವುದಾಗಿ ಜಗಳೂರು ಠಾಣೆಯ ಪಿಐ ರಾಷ್ಟ್ರಪತಿ ರಾಜು ಅವರು  ತಿಳಿಸಿದ್ದಾರೆ.

‘ಲಕ್ಷಾಂತರ ರೂಪಾಯಿ ವಂಚಿಸಿದ್ದ ಮ್ಯಾನೇಜರ್ ಅರವಿಂದ ಅವರನ್ನು ಚಿತ್ರದುರ್ಗ ಬಸ್ ನಿಲ್ದಾಣದಲ್ಲಿ ಬಂಧಿಸಿ ಕರೆ ತಂದು ನ್ಯಾಯಧೀಶರ ಮುಂದೆ ಹಾಜರುಪಡಿಸಿ ಜೈಲಿಗೆ ಕಳಿಸಲಾಗಿದೆ. ಅದರೆ, ಹಣದ ಬಗ್ಗೆ ಕೇಳಿದರೆ ಸ್ವಂತಕ್ಕೆ ಬಳಕೆ ಮಾಡಿಕೊಂಡಿರುವುದಾಗಿ ಹೇಳುತ್ತಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ