Breaking News

ಗ್ರಾಹಕರ ಸೋಗಿನಲ್ಲಿ ಬ್ಯಾಂಕ್​ನಲ್ಲಿ ಹೊಂಚು ಹಾಕಿ ಹಣ ದೋಚುತ್ತಿದ್ದ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

Spread the love

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) : ಬ್ಯಾಂಕ್​ನಲ್ಲಿ ಹಣ ಡ್ರಾ ಮಾಡುವ ಗ್ರಾಹಕರನ್ನು ಹಿಂಬಾಲಿಸಿಕೊಂಡು ಬಂದು ಹಣ ದೋಚುತ್ತಿದ್ದ ಕುಖ್ಯಾತ ಓಜಿ ಕುಪ್ಪಂ ಗ್ಯಾಂಗ್​​ನ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ದೇವನಹಳ್ಳಿಯ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಆಂಧ್ರಪ್ರದೇಶದ ಕೆ. ಹರಿಕೃಷ್ಣ ಮತ್ತು ತಮಿಳುನಾಡಿನ ಕೆ. ಸುಧಾಕರ್ ಬಂಧಿತ ಆರೋಪಿಗಳು. ಬಂಧಿತರಿಬ್ಬರು ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಜ. 4ರಂದು ಗ್ರಾಹಕರೊಬ್ಬರ ಹಣ ದೋಚಿ ಪರಾರಿಯಾಗಿದ್ದರು.

ROBBERY CASE

 

ಘಟನೆಗೆ ಸಂಬಂಧಿಸಿದಂತೆ ವಿಜಯಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಬ್ಯಾಂಕ್​ನಿಂದ ಹಣ ಡ್ರಾ ಮಾಡಲು ಹೋಗಿದ್ದ ಮಹೇಶ್ ಬಾಬು ಎಂಬುವರನ್ನು ಹಿಂಬಾಲಿಸಿಕೊಂಡು ಹೋಗಿದ್ದ ಬಂಧಿತರು,

ವಿಜಯಪುರದ ಬುಲ್ಲಹಳ್ಳಿ ರಸ್ತೆಯಲ್ಲಿ ದರೋಡೆ ಮಾಡಿ 1.5 ಲಕ್ಷ ಹಣ ದೋಚಿ ಪರಾರಿಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಓಜಿಕುಪ್ಪಂ ಗ್ಯಾಂಗ್​ನ ಹರಿಕೃಷ್ಣ ಮತ್ತು ಸುಧಾಕರ್​ನನ್ನು ಬಂಧಿಸಿ, 50 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

‘ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್​ನಲ್ಲಿ ಸರ್ಕಾರ ಯಾರನ್ನೋ ರಕ್ಷಿಸುತ್ತಿದೆ’: ಪ್ರಲ್ಹಾದ್ ಜೋಶಿ

Spread the loveಹುಬ್ಬಳ್ಳಿ : ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಪ್ರಕರಣವನ್ನು ನಿರ್ವಹಿಸುತ್ತಿರುವ ರೀತಿಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ