Breaking News

ವಿಜೃಂಭಣೆಯಿಂದ ನಡೆದ ಪಂಪಾ ವಿರೂಪಾಕ್ಷೇಶ್ವರ ರಥೋತ್ಸವ

Spread the love

ಗಂಗಾವತಿ: ಹಿರೇಜಂತಕಲ್‌ನ ಐತಿಹಾಸಿಕ ಪಂಪಾ ವಿರೂಪಾಕ್ಷೇಶ್ವರನಿಗೆ ರಥಸಪ್ತಮಿ ಜಾತ್ರೆಯ ಅಂಗವಾಗಿ ಇಂದು ಸಂಜೆ ಗೋಧೂಳಿ ಸಮಯದಲ್ಲಿ ವಿಜೃಂಭಣೆಯಿಂದ ರಥೋತ್ಸವ ನಡೆಯಿತು.

ದೇಗುಲದ ಆವರಣದಲ್ಲಿ ಅರ್ಚಕರು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಕಾಯಿ ಒಡೆದು ರಥೋತ್ಸವಕ್ಕೆ ಸಿದ್ಧತೆ ಮಾಡಿಕೊಟ್ಟರು. ಸ್ಥಳೀಯ ಪ್ರಮುಖರು ರಥೋತ್ಸವಕ್ಕೆ ಚಾಲನೆ ನೀಡಿದರು. ದೇಗುಲದ ಆವರಣದಿಂದ ಹೊರಟ ರಥ, ಆಂಜನೇಯನ ಪಾದಗಟ್ಟೆ ತಲುಪಿ ವಾಪಸ್ ದೇಗುಲಕ್ಕೆ ಆಗಮಿಸಿತು. ನಗರ ಸೇರಿದಂತೆ ಗ್ರಾಮೀಣ ಭಾಗದಿಂದ ಆಗಮಿಸಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ, ಹರ್ಷೋದ್ಘಾರದ ಮಧ್ಯೆ ರಥೋತ್ಸವ ನೆರವೇರಿತು. ಭಕ್ತರು ರಥಕ್ಕೆ ಉತ್ತುತ್ತಿ, ಬಾಳೆಹಣ್ಣು, ಹೂವು ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು.ಗಂಗಾವತಿ ನಗರ ಸೇರಿದಂತೆ ಸುತ್ತಲಿನ ಗ್ರಾಮಗಳಾದ ಚಿಕ್ಕಜಂತಕಲ್, ಸಂಗಾಪುರ, ಮಲ್ಲಾಪುರ, ಆನೆಗೊಂದಿ, ವಿನೋಭ ನಗರ, ಮರಳಿ, ಅಯೋಧ್ಯೆ, ಜಂಗಮರ ಕಲ್ಗುಡಿ, ಬಸವಪಟ್ಟಣ, ದಾಸನಾಳ, ವೆಂಕಟಗಿರಿ, ಬಸವನದುರ್ಗ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.


Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶ

Spread the loveಬೆಳಗಾವಿ: ಮಹಾನಗರ ಪಾಲಿಕೆಯ ತಿನಿಸು ಕಟ್ಟೆ ಮಳಿಗೆಗಳನ್ನು ತಮ್ಮ ಪತ್ನಿಯರ ಹೆಸರಿನಲ್ಲಿ ಪಡೆದ ಪ್ರಕರಣದಡಿ ಪಾಲಿಕೆಯ ಇಬ್ಬರು ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ