Breaking News

ಮಹಾ ಕುಂಭಮೇಳಕ್ಕೆ ತೆರಳಿದ್ದ ಕೊಪ್ಪಳದ ಯುವಕ ಸಾವು

Spread the love

ಕೊಪ್ಪಳ: ಮಹಾ ಕುಂಭಮೇಳಕ್ಕೆ ತೆರಳಿದ್ದ ಯುವಕನೋರ್ವ ವಿದ್ಯುತ್ ತಗುಲಿ ಗೋರಖ್​​ಪುರ ರೈಲ್ವೆ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ಮಂಗಳವಾರ ಜರುಗಿದೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸಿದ್ದಾಪುರ ನಿವಾಸಿ ಪ್ರವೀಣ್ ಹೊಸಮನಿ(27) ಮೃತರು.

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಬಳಿಕ ರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರವೀಣ್ ಕಳೆದ 15 ದಿನದ ಹಿಂದೆಯೇ ಮಹಾ ಕುಂಭಮೇಳಕ್ಕೆ ತೆರಳಿದ್ದರು. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನವನ್ನೂ ಮಾಡಿದ್ದರು. ಬಳಿಕ ರಾಮನ ದರ್ಶನ ಪಡೆಯಲೆಂದು ಪ್ರಯಾಗ್​ರಾಜ್​ನಿಂದ ಅಯೋಧ್ಯೆಗೆ ಹೊರಟಿದ್ದರು. ಆದರೆ, ಈ ವೇಳೆ ಮಾರ್ಗಮಧ್ಯೆ ಗೋರಖ್​​ಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ತಗುಲಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯರ ಸಹಕಾರದಿಂದ ಪೊಲೀಸರು, ಗೋರಖ್​​ಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟರು ಎಂದು ತಿಳಿದು ಬಂದಿದೆ.

ಸ್ಥಳೀಯ ಪೊಲೀಸರು ಪ್ರವೀಣ್ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಗೋರಖ್​​ಪುರದಿಂದ ಕೊಪ್ಪಳಕ್ಕೆ ತರಲು ವ್ಯವಸ್ಥೆ ಮಾಡಲಾಗಿದೆ. ಆದರೆ, ವಿದ್ಯುತ್ ಅವಘಡ ಸಂಭವಿಸಿದ್ದು ಹೇಗೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ.

ಮಾಹಿತಿ ತಿಳಿಯುತ್ತಿದ್ದಂತೆ ಕಾರಟಗಿಯ ತಹಶೀಲ್ದಾರ್ ಕುಮಾರಸ್ವಾಮಿ ಮೃತನ ನಿವಾಸಕ್ಕೆ ಆಗಮಿಸಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಮೃತದೇಹವನ್ನು ಕಳಿಸಿಕೊಡುವ ಕುರಿತು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶ

Spread the loveಬೆಳಗಾವಿ: ಮಹಾನಗರ ಪಾಲಿಕೆಯ ತಿನಿಸು ಕಟ್ಟೆ ಮಳಿಗೆಗಳನ್ನು ತಮ್ಮ ಪತ್ನಿಯರ ಹೆಸರಿನಲ್ಲಿ ಪಡೆದ ಪ್ರಕರಣದಡಿ ಪಾಲಿಕೆಯ ಇಬ್ಬರು ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ