Breaking News

ಸರ್ಕಾರಿ ಕೆಲ್ಸದಾಸೆಗೆ ಗಂಡನನ್ನೇ ಕೊಂದಳಾ ಪತ್ನಿ? 4 ತಿಂಗ್ಳು ಬಳಿಕ ಸಮಾಧಿಯಿಂದ ಕಳೆಬರಹ ಹೊರಕ್ಕೆ

Spread the love

ಚಿತ್ರದುರ್ಗ, (ಫೆಬ್ರವರಿ 04): ವಿಚಿತ್ರ. ನಂಬುವುದಕ್ಕೆ ಕಷ್ಟ ಅನಿಸಿದರೂ ನೀವು ನಂಬಲೇಬೇಕು. ಸರ್ಕಾರಿ ಕೆಲಸದ ಆಸೆಗೆ ಪತ್ನಿಯೇ ಗಂಡನನ್ನ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಘಟನೆ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ನಡೆದಿದೆ. ಈತನ ಹೆಸರು ಸುರೇಶ್. ಚಿತ್ರದುರ್ಗದ ನೆಹರು ನಗರ ನಿವಾಸಿ. ಈತನ ತಂದೆ ಸರ್ಕಾರಿ ಕೆಲಸದಲ್ಲಿದ್ದ. ತಂದೆ ಸಾವಿನ ಬಳಿಕ ಅನುಕಂಪದ ಆಧಾರದಲ್ಲಿ ಸುರೇಶ್​ಗೆ ತಂದೆಯ ಕೆಲಸ ಒಲಿದು ಬಂದಿತ್ತು. ಮಗ ನನ್ನ ಚೆನ್ನಾಗಿ ನೋಡಿಕೊಳ್ಳುತ್ತಾನೆಂದು ತಾಯಿ ಆಸೆಯಿಂದ ಗಂಡನ ಕೆಲಸವನ್ನ 2ನೇ ಮಗ ಸುರೇಶ್​ಗೆ ಕೊಡಿಸಿದ್ದಳು. ಆದ್ರೆ, ಮೊಳಕಾಲ್ಮೂರು ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ SDA ಆಗಿದ್ದ ಸುರೇಶ್ ಪತ್ನಿಯ ಕಿರುಕುಳ ತಾಳದೆ ತನ್ನ ತಾಯಿ, ಸಹೋದರರ ಜೊತೆ ಮಾತು ಬಿಟ್ಟಿದ್ದೋನು, ಆಕ್ಟೋಬರ್ 8, 2024ರಂದು ಸಾವನ್ನಪ್ಪಿದ್ದಾನೆ.

ಸರ್ಕಾರಿ ಕೆಲ್ಸದಾಸೆಗೆ ಗಂಡನನ್ನೇ ಕೊಂದಳಾ ಪತ್ನಿ? 4 ತಿಂಗ್ಳು ಬಳಿಕ ಸಮಾಧಿಯಿಂದ ಕಳೆಬರಹ ಹೊರಕ್ಕೆ

ಹೇಳಿ ಕೇಳಿ ಸುರೇಶ್​ಗೆ ಜಾಂಡೀಸ್ ಇತ್ತು. ಗಂಡನ ಸಾವಿನ ವಿಷಯವನ್ನ ಆತನ ಮನೆಯವರಿಗೂ ತಿಳಿಸದೇ ಪತ್ನಿ ನಾಗರತ್ನ ಅಂತ್ಯಕ್ರಿಯೆ ಮುಗಿಸಿದ್ದಳು. ಈಗ ಮೃತನ ತಾಯಿ ಸರೋಜಮ್ಮ. ಸೊಸೆ ನಾಗರತ್ನ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ನನ್ನ ಮಗನನ್ನ ಉಸಿರು ಗಟ್ಟಿಸಿಕೊಂದಿದ್ದಾಳೆ. ಜಾಂಡೀಸ್​ನಿಂದ ಸತ್ತ ಎಂದು ನಾಟಕವಾಡ್ತಿದ್ದಾಳೆ. ಅವನ ಕೆಲಸ ಇವಳಿಗೆ ಬರುತ್ತೆ ಎಂದು ಈ ಕೃತ್ಯವೆಸಗಿದ್ದಾಳೆ ಎಂದು ಪೊಲೀಸ್ ಹಾಗೂ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅಂತ್ಯಕ್ರಿಯೆ ನಡೆದ 4 ತಿಂಗಳ ಬಳಿಕ ಪೊಲೀಸ್ರು ಇದೀಗ ಹೊಳಲ್ಕೆರೆ ರಸ್ತೆಯ‌ ರುದ್ರಭೂಮಿಯಲ್ಲಿ ಸುರೇಶ್ ಕಳೆಬರಹ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ