Breaking News

ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ

Spread the love

ಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆಯು ಪ್ರದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿಕರು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟು ದೇಶಕ್ಕೆ ಉತ್ತಮ ಪ್ರಜೆಯಾಗಿ ರೂಪಿಸಬೇಕಾದವರೇ ಪುಟ್ಟ ಬಾಲಕಿ ಎಂದೂ ನೋಡದೆ ಅತ್ಯಾಚಾರವೆಸಗಿದ್ದಾರೆ. ಹೆಣ್ಣುಮಕ್ಕಳನ್ನು ಗೌರವಿಸಬೇಕು, ಅವರನ್ನು ರಕ್ಷಿಸಬೇಕೆನ್ನುವ ಪಾಠವನ್ನು ಗಂಡು ಮಕ್ಕಳಿಗೆ ಚಿಕ್ಕಂದಿನಿಂದಲೇ ತಿಳಿಸಿಕೊಡಬೇಕಿದ್ದ ಶಿಕ್ಷಕರು ಇಂತಹ ಅಚಾತುರ್ಯವೆಸಗಿದ್ದಾರೆ.

ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ವಿಚಾರಿಸಿದಾಗ, ತಾಯಿ ಹಲ್ಲೆ ನಡೆಸಿರುವುದಾಗಿ ಬಹಿರಂಗಪಡಿಸಿದರು.


Spread the love

About Laxminews 24x7

Check Also

9 ಆದರೂ ಬಾರದ ಹಿನ್ನೆಲೆ ಕಾರ್ಯಾಲಯ ಖಾಲಿ ಖಾಲಿ ಆಗಿದೆ.

Spread the love ಬೇಸಿಗೆ ಹಿನ್ನೆಲೆ ಅಧಿಕಾರಿಗಳ ಹಿತದಲ್ಲಿ ಕಾರ್ಯಾಲಯದ ಸಮಯ ಬದಲಾಯಿಸಿದ ಸರ್ಕಾರ ಗಂಟೆ 9 ಆದರೂ ಕಾರ್ಯಾಲಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ