ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ಯಾವುದೇ ಕ್ಷಣದಲ್ಲಿ ಘೋಷಣೆಯಾಗಬಹುದು. ಈ ತಿಂಗಳ 20ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಅವರಿಗೆ ಅನುಭವದ ಕೊರತೆ ಇದೆ ಎನ್ನುವ ಶ್ರೀರಾಮುಲು ಹೇಳಿಕೆಗೆ ಪ್ರತಿಕ್ರಿಯಿಸಿ, ರಾಜ್ಯದ ಅಧ್ಯಕ್ಷನಾಗಿ ನನಗೆ ಅನುಭವದ ಕೊರತೆ ಇರಬಹುದು. ಆದರೆ ಪಕ್ಷದ ಕಾರ್ಯಕರ್ತನಾಗಿ ನನ್ನದೇ ಆದ ಅನುಭವ ಇದೆ. ಕಾರ್ಯದರ್ಶಿಯಾಗಿ, ಉಪಾಧ್ಯಕ್ಷನಾಗಿ, ಕಾರ್ಯಕರ್ತನಾಗಿ ಕೆಲಸ ಮಾಡಿ ಅನುಭವ ಇದೆ. ರಾಜ್ಯದ ಲಕ್ಷಾಂತರ ಕಾರ್ಯಕರ್ತರು ನನ್ನನ್ನು ಪ್ರೀತಿಸುತ್ತಾರೆ. ನಿರಂತರ ಹೋರಾಟ ಮಾಡಿಕೊಂಡು ಬಂದಿರುವುದಕ್ಕೆ ಕಾರ್ಯಕರ್ತರಿಗೆ ತೃಪ್ತಿ, ನನ್ನ ಬಗ್ಗೆ ಸಂತೋಷ ಇದೆ ಎಂದು ತಿರುಗೇಟು ನೀಡಿದರು.