Breaking News

ಬಿಟ್ ಕಾಯಿನ್ ಹಗರಣ: ನಲಪಾಡ್ ಗೆ ಬಂಧನದ ಭೀತಿ

Spread the love

ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಎಸ್‌ಐಟಿ ನೋಟಿಸ್ ನೀಡಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇದರಿಂದಾಗಿ ನಲಪಾಡ್ ಅವರಿಗೆ ಬಂಧನ ಭೀತಿ ಶುರುವಾಗಿದೆ.

ಅಂತರರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆಗೆ ನಲಪಾಡ್ ವ್ಯಾವಹಾರಿಕ ನಂಟು ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈ ಆರೋಪ ಹಿನ್ನೆಲೆಯಲ್ಲಿ ನಲಪಾಡ್ ಅವರಿಗೆ ಫೆಬ್ರವರಿ 7ರಂದು ವಿಚಾರಣೆಗೆ ಹಾಜರಾಗುವಂತೆ ಸೆಕ್ಷನ್ 41ರಡಿ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್‌ ನೀಡಿದೆ.ಸಾಮಾನ್ಯವಾಗಿ ಆರೋಪಿತರಿಗೆ ಈ ಸೆಕ್ಷನ್ ಅಡಿ ತನಿಖಾಧಿಕಾರಿ ನೋಟಿಸ್‌ ನೀಡುತ್ತಾರೆ.

ಹೀಗಾಗಿ ಅದೇ ಸೆಕ್ಷನ್ ಅಡಿ ನಲಪಾಡ್ ಅವರಿಗೆ ಎರಡನೇ ಬಾರಿಗೆ ಎಸ್‌ಐಟಿ ವಿಚಾರಣೆಗೆ ಕರೆದಿರುವುದು ಬಂಧನ ಭೀತಿಗೆ ಕಾರಣವಾಗಿದೆ. ಕೆಲ ತಿಂಗಳ ಹಿಂದೆ ಕೂಡ ಬಿಟ್ ಕಾಯಿನ್ ಹಗರಣ ಸಂಬಂಧ ನಲಪಾಡ್ ಅವರನ್ನು ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆ ಪಡೆದಿತ್ತು. ಹ್ಯಾಕರ್ ಶ್ರೀಕಿಯಿಂದ ಕೋಟ್ಯಂತರ ರುಪಾಯಿಯನ್ನು ನಲಪಾಡ್ ಪಡೆದಿದ್ದಾರೆ ಎಂಬ ಆಪಾದನೆ ಸಹ ಇದೆ.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ