Breaking News

ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು 24 ಸಾವಿರ ರೂವನ್ನು ಶಾಲೆಗೆ ನೀಡಿದ ಆಶಾ ಕಾರ್ಯಕರ್ತೆ*

Spread the love

ರಾಜ್ಯ ಸರ್ಕಾರದ ಜನಪ್ರಿಯ ಗೃಹಲಕ್ಷ್ಮೀ ಯೋಜನೆ ಒಂದೆಲ್ಲ ಒಂದು ಒಳ್ಳೆ ಕಾರಣಕ್ಕೆ ಸುದ್ದಿಯಲ್ಲಿದೆ. ಮಹಿಳೆಯರು ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸದ್ಬಳಕೆ ಮಾಡುತ್ತಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಐರಣಿ ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು 24 ಸಾವಿರ ರೂವನ್ನು ಶಾಲೆಗೆ ನೀಡಿದ್ದಾರೆ.

ಆಶಾ ಕಾರ್ಯಕರ್ತೆ ಗಂಗಮ್ಮ ಲಗುಬಿಗಿ ಎಂಬುವರು ಹಣ ಉಳಿಸಿ 24,000ರೂ. ಗಳನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ನೀಡಿದ್ದಾರೆ. ಗಂಗಮ್ಮಳ ಕಾರ್ಯಕ್ಕೆ ಗ್ರಾಮದ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು. ಮಕ್ಕಳಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಹಣ ನೀಡಿದೆ ಎಂದು ಗಂಗಮ್ಮ ಹೇಳಿದ್ದಾರೆ. ಗಂಗಮ್ಮಳ ಹೃದಯ ವೈಶಾಲ್ಯತೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ