Breaking News

ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಳಸಾರೋಹಣ ಕಾರ್ಯಕ್ರಮವ

Spread the love

ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮದೇವತೆ ಶ್ರೀ ಲಕ್ಷ್ಮಿ ದೇವಸ್ಥಾನದ ವಾಸ್ತುಶಾಂತಿ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಾತೋಶ್ರೀ ಶ್ರೀಮತಿ ಗಿರಿಜಾತಾಯಿ ಹಟ್ಟಿಹೊಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಉದ್ಘಾಟಿಸಿದರು.

ನನ್ನ ತಾಯಿಯ ತವರೂರಾದ ಬಡಾಲ ಅಂಕಲಗಿ ಗ್ರಾಮಕ್ಕೂ‌ ನನಗೂ ಅವಿನಾಭಾವ ಸಂಬಂಧವಿದೆ, ನಾನು‌ ಆಟ ಆಡಿ ಬೆಳೆದಂತ ಗ್ರಾಮ ನನ್ನ ಕ್ಷೇತ್ರದಲ್ಲಿರುವುದೂ ಜೊತೆಗೆ ಗ್ರಾಮದ ಅಭಿವೃದ್ಧಿ ಸೇರಿದಂತೆ ಜನರ ಸೇವೆ ಮಾಡುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ.

ನನ್ನ ಅಧಿಕಾರದ ಅವಧಿಯಲ್ಲಿ ಈಗಾಗಲೇ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದ್ದು, ಗ್ರಾಮದಲ್ಲಿ ಒಟ್ಟು 11 ಗುಡಿ-ಗೋಪುರಗಳನ್ನು ಅಭಿಪಡಿಸಿದ್ದೇನೆ. ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಕೆಲಸಗಳ ಜೊತೆಗೆ ಸರ್ವ ಜನಾಂಗಗಳ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿದ್ದೇನೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯ ರಾಮಮಂದಿರದ ವೇದಮೂರ್ತಿ ರಾಚಯ್ಯ ಅಜ್ಜನವರು ಹಾಗೂ ನೇತ್ರತ್ವ ಬಿಳಕಿ ರುದ್ರಮಠದ ಶ್ರೀ ಚನ್ನಬಸವ ದೇವರು ವಹಿಸಿದ್ದರು‌.

ಈ ವೇಳೆ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಗ್ರಾಮದ ಹಿರಿಯರು ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿದಂತೆ ಕುಟುಂಬದ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ