Breaking News

ಪ್ರಯಾಗ್​​ರಾಜ್​ನಿಂದ ಹಿಂತಿರುಗುತ್ತಿದ್ದ ಬೆಳಗಾವಿಯ ನಾಲ್ವರ ಸಾವು

Spread the love

ಬೆಳಗಾವಿ: ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಇಂದು ಬೆಳಗ್ಗಿನ ಜಾವ ಮಧ್ಯ ಪ್ರದೇಶದ ಇಂಧೋರ್ ಜಿಲ್ಲೆಯ ಮಾಣಪುರ ಬಳಿ ಟೆಂಪೋ ಟ್ರಾವೆಲರ್​, ಟ್ರಕ್​ ಹಾಗೂ ಬೈಕ್​ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದಾರೆ.

ಬಸವನಗಲ್ಲಿಯ ಸಾಗರ್​ ಶಾಪುರಕರ್ (ಟಿಟಿ ಚಾಲಕ), ಕ್ರಾಂತಿ ನಗರದ ನಿವಾಸಿ ನೀತಾ ಬಡಮಂಜಿ, ಶಿವಾಜಿನಗರದ ಸಂಗೀತಾ ಮೇತ್ರಿ, ವಡಗಾವಿಯ ಜ್ಯೋತಿ ಖಾಂಡೇಕರ್ ಮೃತರು.

ಜನವರಿ 24ರಂದು ಟಿಟಿ ವಾಹನದ ಮೂಲಕ 20 ಜನರ ತಂಡವು ಬೆಳಗಾವಿಗೆ ಪ್ರಯಾಣ ಬೆಳೆಸಿತ್ತು. ಪ್ರಯಾಗ್​ರಾಜ್​ನಿಂದ ವಾಪಸಾಗುವಾಗ ಅಪಘಾತ ಸಂಭವಿಸಿದೆ. 16 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಮೃತರ ಕುಟುಂಬಸ್ಥರು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರ ಕಚೇರಿಗೆ ಆಗಮಿಸಿದ್ದು, ಮೃತದೇಹಗಳನ್ನು ಬೆಳಗಾವಿಗೆ ಕರೆತರುವ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಮೇಯರ್ ಶಿವಾಜಿ ಸುಂಠಕರ್, “ಬೆಳಗಾವಿಯ ನಾಲ್ವರು ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಅಪಘಾತ ಸಂಭವಿಸಿರುವ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಅವರಿಗೆ ಮಾಹಿತಿ ನೀಡುತ್ತಿದ್ದಂತೆ ಕೂಡಲೇ ಅವರು ಅಲ್ಲಿನ ಜಿಲ್ಲಾಧಿಕಾರಿ ಗಮನಕ್ಕೆ ತಂದರು. ಅಲ್ಲಿನ ಬಿಜೆಪಿ ಜಿಲ್ಲಾಧ್ಯಕ್ಷ ಸುಮಿತ್ ಮಿಶ್ರಾ ನೀಡಿದ ಮಾಹಿತಿ ಪ್ರಕಾರ ಟಿಟಿ ವಾಹನದಲ್ಲಿದ್ದ ಬೆಳಗಾವಿ ನಾಲ್ವರು ಮತ್ತು ಬೈಕ್​ನಲ್ಲಿ ಹೋಗುತ್ತಿದ್ದ ಇಂಧೋರ್​ನ ಇಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿಯ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ” ಎಂದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ