Breaking News
Home / ಜಿಲ್ಲೆ / ಬೆಂಗಳೂರು / ಬೆಂಗಳೂರಲ್ಲಿ ಭಾರತ್ ಬಂದ್ ಹೇಗಿತ್ತು..? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಬೆಂಗಳೂರಲ್ಲಿ ಭಾರತ್ ಬಂದ್ ಹೇಗಿತ್ತು..? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

Spread the love


ಬೆಂಗಳೂರು, ಡಿ.8- ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆಯ ಬಿಸಿ ಏರಿತ್ತು. ಮೈಸೂರು ಬ್ಯಾಂಕ್ ವೃತ್ತ, ಟೌನ್‍ಹಾಲ್, ಮೌರ್ಯ ವೃತ್ತದಲ್ಲಿ ರೈತ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳವರು ಪ್ರತಿಭಟನೆ ನಡೆಸಿ ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದವು.

ರಾಜ್ಯ ರೈತ ಸಂಘ, ಹಸಿರು ಸೇನೆ, ಸಿಪಿಎಂ, ಎಎಪಿ, ಕಾಂಗ್ರೆಸ್ , ಜೆಡಿಎಸ್ ಪಕ್ಷಗಳು, ಕನ್ನಡ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ, ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳವರು ನಗರದ ವಿವಿಧೆಡೆ ಇಂದು ಪ್ರತಿಭಟನೆ ರ್ಯಾಲಿ, ಮೆರವಣಿಗೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದವು.

ನೂತನ ಕೃಷಿ ಕಾಯ್ದೆಗಳನ್ನು ಖಂಡಿಸಿ ರೈತ ಸಂಘಟನೆಗಳು ಕರೆಕೊಟ್ಟಿದ್ದ ಭಾರತ್ ಬಂದ್‍ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಂಗಳೂರಿನ ಹಲವೆಡೆ ಪ್ರತಿಭಟನಾ ರ್ಯಾಲಿಗಳು ನಡೆದವು.ವಿಶೇಷವಾಗಿ ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ರ್ಯಾಲಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಹರಿಹಾಯ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಕೇವಲ ಬಂಡವಾಳ ಶಾಹಿಗಳಿಗೆ ಅನುಕೂಲವಾಗುವಂತ ಕಾಯ್ದೆಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ ಮಾಡುತ್ತಿದೆ. ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಯನ್ನು ಮತ್ತೆ ಮಂಡನೆ ಮಾಡಿ ಬಂಡತನ ಪ್ರದರ್ಶನ ಮಾಡುತ್ತಿದೆ ಎಂದು ಹರಿಹಾಯ್ದರು.

ಅತ್ತ ಟೌನ್‍ಹಾಲ್ ಬಳಿ ರಾಜ್ಯ ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರು ಸಮಾವೇಶಗೊಂಡು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರು. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಥ್ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳಿಗೆ ದೇಶ-ವಿದೇಶಗಳಿಂದ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸರ್ಕಾರ ಹಠಕ್ಕೆ ಬಿದ್ದು ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗಿದೆ. ವಿರೋಧ ವ್ಯಕ್ತಪಡಿಸುತ್ತಿರುವ ರೈತರ ಮೇಲೆ ದೌರ್ಜನ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ಇತ್ತ ಮೈಸೂರು ಬ್ಯಾಂಕ್ ವೃತ್ತದ ಬಳಿ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈತ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿ ಕಾಯ್ದೆಗಳ ವಾಪಸ್‍ಗೆ ಆಗ್ರಹಿಸಿದರು.ಮೂರು ಪ್ರಮುಖ ವೃತ್ತದಲ್ಲಿ ಪ್ರತಿಭಟನಾ ರ್ಯಾಲಿ ನಡೆದಿದ್ದರಿಂದ ಕೆಲ ಕಾಲ ಸಾರ್ವಜನಿಕರಿಗೆ ಟ್ರಾಫಿಕ್ ಬಸಿ ತಟ್ಟಿತು.

ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆದ ಪರಿಣಾಮ ಎಪಿಎಂಸಿ ಮಾರುಕಟ್ಟೆಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಹಣ್ಣು, ತರಕಾರಿ, ದಿನಸಿ ಪದಾರ್ಥಗಳು ಸರಬರಾಜು ಆಗಿರಲಿಲ್ಲ. ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್‍ಗಳು ಎಂದಿನಂತೆ ಸಂಚರಿಸಿದರೂ ಜನರ ಓಡಾಟ ಕೊಂಚ ವಿರಳವಾಗಿತ್ತು.

ಆಟೋ, ಟ್ಯಾಕ್ಸಿ, ಒಲಾ, ಊಬರ್ ಓಡಾಟ ಎಂದಿನಂತೆ ಇತ್ತು. ಭಾರತ್ ಬಂದ್ ಇರುವುದರಿಂದ ಎಲ್ಲಿ ತೊಂದರೆಯಾಗುತ್ತದೊ ಎಂದು ವಿಮಾನ ಪ್ರಯಾಣಿಕರು ಬೆಳಗ್ಗೆಯೇ ವಿಮಾನ ನಿಲ್ದಾಣ ತಲುಪಿದರು. ವಿಮಾನ ನಿಲ್ದಾಣಕ್ಕೆ ಹೋಗುವ ವಾಯುವಜ್ರ ಬಸ್‍ಗಳಲ್ಲೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು.

 

Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ