Breaking News

ಮಗನನ್ನೂ ರಾಜಕೀಯ ಅಖಾಡಕ್ಕಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ, ಫೆಬ್ರವರಿ 7: ಲೋಕಸಭೆ ಚುನಾವಣೆ ಮೂಲಕ ಮಗಳು ಪ್ರಿಯಾಂಕಾ ಜಾರಕಿಹೊಳಿಯನ್ನು ರಾಜಕೀಯ ಪ್ರವೇಶಿಸುವಂತೆ ಮಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ಇದೀಗ ಮಗನನ್ನೂ ರಾಜಕೀಯ ಅಖಾಡಕ್ಕಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ ಪುತ್ರ ರಾಹುಲ್‌ ಜಾರಕಿಹೊಳಿ ರಾಜ್ಯ ಯುವ ಕಾಂಗ್ರೆಸ್ ಘಟಕಕ್ಕೆ ಪ್ರಧಾನ ಕಾರ್ಯದರ್ಶಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್‌ ಜಾರಕಿಹೊಳಿ ಆಯ್ಕೆಯಾದ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಗೋಕಾಕ್​ನ ಬಸವೇಶ್ವರ ವೃತ್ತದಲ್ಲಿ ಸಂಭ್ರಮಾಚರಣೆ ನಡೆದಿದೆ. ರಾಹುಲ್ ಜಾರಕಿಹೊಳಿ‌ ಬೆಂಬಲಿಗರು ಪಟಾಕಿ ಸಿಡಿಸಿ‌‌ ಸಂಭ್ರಮಾಚರಣೆ ಮಾಡಿದ್ದಾರೆ. ಇದೇ ವೇಳೆ, ಸತೀಶ್ ಜಾರಕಿಹೊಳಿ‌, ರಾಹುಲ್ ಜಾರಕಿಹೊಳಿ‌ ಪರ ಘೋಷಣೆ ಮೊಳಗಿದೆ.

ಈ ಬೆಳವಣಿಗೆಯೊಂದಿಗೆ ರಾಹುಲ್ ಜಾರಕಿಹೊಳಿ‌ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದಂತಾಗಿದೆ. ಈಗಾಗಲೇ ಮಗಳನ್ನು ಸಂಸದೆ ಮಾಡಿರುವ ಸತೀಶ್ ಜಾರಕಿಹೊಳಿ‌ ಈಗ ಮಗನ ರಾಜಕೀಯ ಭವಿಷ್ಯ ರೂಪಿಸಲು ಸತೀಶ್ ಮಾಸ್ಟರ್​ಪ್ಲ್ಯಾನ್ ಮಾಡಿದ್ದಾರೆ. ಆರಂಭಿಕವಾಗಿ ಮಗನಿಗೆ ಪಕ್ಷ ಸಂಘಟನೆ ಜವಾಬ್ದಾರಿ ನೀಡುವಂತೆ ಮಾಡಿದ್ದಾರೆ.

ಒಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಜತೆ ಮುಸುಕಿನ ಗುದ್ದಾಟ ನಡೆಸುತ್ತಿರುವ ಸಚಿವ ಸತೀಶ್ ಜಾರಕಿಹೊಳಿ, ಈಗಾಗಲೇ ಲೋಕಸಭೆ ಚುನಾವಣೆ ಮೂಲಕ ಮಗಳನ್ನು ರಾಜಕೀಯಕ್ಕೆ ಕರೆ ತಂದಿದ್ದಾರೆ. ಇದೀಗ ಮಗ ರಾಹುಲ್ ಜಾರಕಿಹೊಳಿಯನ್ನು ಕೂಡ ರಾಜಕೀಯದ ಅಖಾಡಕ್ಕೆ ಸೆಳೆದಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ