: ಕರ್ನಾಟಕದ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರದಿಂದ ಕಮಲದ ಮನೆಯಲ್ಲಿ ಒಡಕು ಮೂಡಿದೆ. ಹಾಲಿ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಡುವೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಜೋರಾಗಿದೆ.
ಇನ್ನೂ ಪ್ರಯಾಗ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಶಾಸಕ ಯತ್ನಾಳ ಭಾವಚಿತ್ರ ಹಾಗೂ ಘೋಷಣೆಗಳು ರಾರಾಜಿಸಿವೆ. ವಿಜಯಪುರ ಜಿಲ್ಲೆ ಹಾಗೂ ಬಾಗಲಕೋಟ ಜಿಲ್ಲೆಯ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪೊಟೊ ಹಿಡಿದು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮೊಳಗಿಸಿದ್ದಾರೆ.
ವಿಜಯಪುರ ಜಿಲ್ಲೆಯ ಬಿಜೆಪಿ ಪದಾಧಿಕಾರಿ ನಂದು ಸಾಹುಕಾರ್ ಗಡಗಿ ನೇತೃತ್ವದಲ್ಲಿ ಶಾಸಕ ಯತ್ನಾಳರ ಫೊಟೊ ಹಿಡಿದು ಪವಿತ್ರ ಗಂಗಾ ಸ್ನಾನ ಮಾಡಿದ್ದು ವಿಡಿಯೋ ಇದೀಗ ವೈರಲ್ ಆಗಿದೆ.