Breaking News

ದಾವಣಗೆರೆಯಲ್ಲಿ ಎರಡು ಹಂದಿಗಳಿವೆ:ಯತ್ನಾಳ್

Spread the love

ದಾವಣಗೆರೆ: “ನಮಗೆ ಎಷ್ಟು ಅಪಮಾನ ಆಗಿದೆ ಎಂದರೆ ಬೇರೆಯಾರಾದರೂ ಆಗಿದ್ದರೆ ನೇಣು ಹಾಕಿಕೊಳ್ಳಬೇಕಿತ್ತು. ನಾವು ಹಾಕಿಕೊಂಡಿಲ್ಲ” ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ಭಾನುವಾರ ಮಾತನಾಡಿದ ಅವರು, “ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಗೃಹ ಪ್ರವೇಶವಿದೆ. ಹೀಗಾಗಿ ದೆಹಲಿಗೆ ತೆರಳುತ್ತಿದ್ದೇವೆ “ಎಂದರು. ಮುಂದುವರೆದ ಯತ್ನಾಳ್​​, “ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರವಾಗಿ ನಮ್ಮ ವಿರುದ್ಧದ ವರದಿಗಳು ಬರುತ್ತಿದೆ. ದೆಹಲಿಯಲ್ಲಿ ರಾಷ್ಟ್ರೀಯ ನಾಯಕರು ಸಿಗುತ್ತಾರೋ, ಇಲ್ಲವೋ ಎನ್ನುವುದು ನಿಮಗೆ ಏಕೆ ಹೇಳಲಿ. ನಾವು ದೆಹಲಿಗೆ ಹೋಗುತ್ತೇವೆ, ನನ್ನ ಪ್ರಯತ್ನ ಮಾಡುತ್ತೇನೆ” ಎಂದರು.

ದಾವಣಗೆರೆಯಲ್ಲಿ ಎರಡು ಹಂದಿಗಳಿವೆ: “ಹಾದಿ ಬೀದಿಯಲ್ಲಿ ಹಂದಿಗಳು ಹೇಳುತ್ತವೆ ಎಂದರೆ ಅವರಿಗೆ ನಾನೇಕೆ ಉತ್ತರ ನೀಡಲಿ. ದಾವಣಗೆರೆಯಲ್ಲಿ ಎರಡು ಹಂದಿಗಳು ಇವೆ. ಶಿವಾನಂದ ಸರ್ಕಲ್‌ನಲ್ಲಿ ವಿಜಯೇಂದ್ರ ಮನೆ ಮುಂದೆ ನೀವು ನಿಲ್ಲಿ ಅವರ ಗುಣಗಾನ ಮಾಡಿ ಎಂದು ಹೇಳಿದ್ದಾರೆ. ಇನ್ನು ದೆಹಲಿಯಲ್ಲಿ ಎಎಪಿ ಹೀನಾಯವಾಗಿ ಸೋಲಲು ಕಾರಣ ಅವರ ಭ್ರಷ್ಟಾಚಾರ. ಅದಕ್ಕಾಗಿ ರಾಜ್ಯದಲ್ಲಿ ಕೂಡ ಭ್ರಷ್ಟಾಚಾರ ರಹಿತವಾಗಿ ಮಾಡಲು ನಿರ್ಧಾರ ಮಾಡಿದ್ದೇವೆ” ಎಂದು ಟಾಂಗ್​ ಕೊಟ್ಟರು.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ