Breaking News

ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಡಿ ಕೆ ಶಿವಕುಮಾರ್

Spread the love

ಬೆಂಗಳೂರು/ಪ್ರಯಾಗ್​ರಾಜ್ : ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಉತ್ತರಪ್ರದೇಶದ ಪ್ರಯಾಗ್​ರಾಜ್​ನ ತ್ರಿವೇಣಿ ಸಂಗಮದಲ್ಲಿ ಭಾನುವಾರ ಕುಟುಂಬ ಸಮೇತ ಪುಣ್ಯ ಸ್ನಾನ ಮಾಡಿದರು.

ಡಿಸಿಎಂ ಡಿ. ಕೆ ಶಿವಕುಮಾರ್ ಅವರು ತಾವು ಅಜ್ಯಯ್ಯ ಎಂದೇ ಕರೆಯಲ್ಪಡುವ ನೆಚ್ಚಿನ ಗುರುಗಳಾದ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಶಾಸ್ತ್ರೋಕ್ತವಾಗಿ ಪತ್ನಿ ಉಷಾ ಅವರೊಂದಿಗೆ ಪುಣ್ಯ ಸ್ನಾನ ಮಾಡಿದರು. ನಂತರ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪತ್ನಿ ಉಷಾ ಅವರ ಜೊತೆಗೂಡಿ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿದರು.

ಡಿಸಿಎಂ ಡಿ. ಕೆ ಶಿವಕುಮಾರ್ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿರುವ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದೆ. 144 ವರ್ಷಗಳಿಗೊಮ್ಮೆ‌ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ ಎಂದು ಅವರು ತಮ್ಮ ಅನುಭವವನ್ನು ಟ್ವೀಟ್​ನಲ್ಲಿ ಹೇಳಿಕೊಂಡಿದ್ದಾರೆ.


Spread the love

About Laxminews 24x7

Check Also

ಅರೆಸ್ಟ್​​ ವಾರೆಂಟ್​ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್​​ಗೆ ಓಡೋಡಿ ಬಂದ ಸಚಿವ ಮುನಿಯಪ್ಪ

Spread the loveಬೆಂಗಳೂರು, ಮಾರ್ಚ್​ 12: 2013ರ ಹಲ್ಲೆ ಅಟ್ರಾಸಿಟಿ ಕೇಸ್​​ಗೆ ಸಂಬಂಧಿಸಿದಂತೆ ರಾಬರ್ಟ್‌ಸನ್‌ ಪೇಟೆ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ