Breaking News

ಪೊಲೀಸರ ಹಾಗೂ ರೈತರ ಮಧ್ಯೆ ಮಾತಿನ ಚಕಮಕಿ,ಶಾಲು ಬಾರು ಕೋಲು ತೆಗೆಯಿರಿ ಎಂದು ಪೊಲೀಸ್ ಸಿಬ್ಬಂದಿ

Spread the love

ಬೆಂಗಳೂರು: ಕೃಷಿಕಾಯ್ದೆ ವಿರೋಧಿಸಿ ಇಂದು ವಿಧಾನಸೌಧ ಮುತ್ತಿಗೆ ಹಿನ್ನೆಲೆಯಲ್ಲಿ ಈಗಾಗಲೇ ರೈತರು ಮೆಜೆಸ್ಟಿಕ್ ರೈಲ್ವೆ ಸ್ಟೇಷನ್‍ಗೆ ಆಗಮಿಸುತ್ತಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ಮಾತಿನ ಚಕಮಕಿ ನಡೆದಿದೆ.ಶಾಲು ತೆಗೆಯಿರಿ, ಬಾರು ಕೋಲು ತೆಗೆಯಿರಿ ಎಂದು ಪೊಲೀಸ್ ಸಿಬ್ಬಂದಿ ವಾರ್ನ್ ಮಾಡಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ವಾಗ್ವಾದ ನಡೆದಿದ್ದು, ಪೊಲೀಸ್ ಸಿಬ್ಬಂದಿ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಶಾಲು ತೆಗೆಯಿರಿ, ಅಂತ ಹೇಳೋಕೆ ಅವನು ಯಾರು?, ರೈತರಿಗೆ ಶಾಲು ಸಿಂಬಲ್ ಯಾವನು ಅವನು ಅಂತ ಪೊಲೀಸರೇ ವಿರುದ್ಧ ತಿರುಗಿ ಬಿದ್ದರು.

ವಿವಿಧ ಜಿಲ್ಲೆಗಳಿಂದ ರೈತರು ರೈಲ್ವೆ ಸ್ಟೇಷನ್ ಗೆ ಆಗಮಿಸಿ ರ್ಯಾಲಿ ನಡೆಸಲಿದ್ದಾರೆ. ಬೆಳ್ಳಗ್ಗೆ 11 ಗಂಟೆಗೆ ಇಲ್ಲಿಂದ ವಿಧಾನಸೌಧದ ಕಡೆ ಜಾಥ ನಡೆಯಲಿದೆ. ರೈತರ ಜಾಥ ಮೆಜೆಸ್ಟಿಕ್ ರೈಲ್ವೆ ಸ್ಟೇಷನ್ ನಿಂದ ಆರಂಭ ಹಿನ್ನೆಲೆ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಮೆಜೆಸ್ಟಿಕ್ ರೈಲ್ವೆ ಸ್ಟೇಷನ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೆಳ್ಳಂಬೆಳಗ್ಗೆನೇ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್ ಮುಂಭಾಗ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ರೈಲ್ವೆ ಸ್ಟೇಷನ್ ಮುಂಭಾಗ ಬ್ಯಾರೀಕೇಡ್ ಗಳನ್ನ ಹಾಕಿ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ