Breaking News

ಪೊಲೀಸ್ ಠಾಣೆಯಲ್ಲೇ ಬೈಕ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ.

Spread the love

ಚಾಮರಾಜನಗರ: ಪೊಲೀಸ್ ಠಾಣೆಯ ಗೇಟ್​​ನ ಬೀಗ ಮುರಿದು ಒಳ ನುಗ್ಗಿ ಜಪ್ತಿ ಮಾಡಿ ಇಡಲಾಗಿದ್ದ ಬೈಕ್​​ ಕದ್ದಿರುವ ಘಟನೆ ಚಾಮರಾಜನಗರದ ಸಿಇಎನ್ ಠಾಣೆಯಲ್ಲಿ ನಡೆದಿದೆ. ಬೈಕ್ ಕದ್ದೊಯ್ದಿದ್ದ ಚಾಮರಾಜನಗರದ ಅರ್ಫಾಜ್ ಹಾಗೂ ಇಮ್ರಾನ್ ಎಂಬ ಆರೋಪಿಗಳನ್ನು ಪಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ತಡರಾತ್ರಿ ಅರ್ಫಾಜ್ ಮತ್ತು ಇಮ್ರಾನ್ ಕಾಂಪೌಂಡ್ ಹಾರಿ ಠಾಣಾ ಆವರಣಕ್ಕೆ ಬಂದು ಗೇಟಿನ ಬೀಗ ಮುರಿದಿದ್ದಾರೆ‌‌. ಬಳಿಕ, ಎನ್​​ಡಿಪಿಎಸ್ ಕಾಯ್ದೆಯಡಿ ಜಪ್ತಿ ಮಾಡಿದ್ದ ಹೊಂಡಾ ಶೈನ್ ಬೈಕ್​ನ್ನು ಕದ್ದೊಯ್ದಿದ್ದರು.

ಬೆಳಗ್ಗೆ ಠಾಣೆಗೆ ಬಂದ ಪೊಲೀಸರು ಗೇಟ್​​ನ ಬೀಗ ಇಲ್ಲದಿರುವುದನ್ನು ಕಂಡು ಸಿಸಿಟಿವಿ ಪರಿಶೀಲಿಸಿದಾಗ ಕಳ್ಳರು ಬೈಕ್ ಕದ್ದೊಯ್ದಿರುವುದು ಗೊತ್ತಾಗಿದೆ. ಕೂಡಲೇ ಚಾಮರಾಜನಗರ ಪಟ್ಟಣ ಠಾಣೆಗೆ ದೂರು ಕೊಟ್ಟಿದ್ದಾರೆ‌. ಸಿಸಿಟಿವಿ ದೃಶ್ಯ ಆಧರಿಸಿ ಇಬ್ಬರನ್ನು ಬಂಧಿಸಿ, ಬೈಕ್ ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಅರೆಸ್ಟ್​​ ವಾರೆಂಟ್​ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್​​ಗೆ ಓಡೋಡಿ ಬಂದ ಸಚಿವ ಮುನಿಯಪ್ಪ

Spread the loveಬೆಂಗಳೂರು, ಮಾರ್ಚ್​ 12: 2013ರ ಹಲ್ಲೆ ಅಟ್ರಾಸಿಟಿ ಕೇಸ್​​ಗೆ ಸಂಬಂಧಿಸಿದಂತೆ ರಾಬರ್ಟ್‌ಸನ್‌ ಪೇಟೆ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ