Breaking News

ಅಮಾನತಾದ ಖಾನಾಪುರದ ತಹಶೀಲ್ದಾರ್‌ ಪ್ರಕಾಶ್​ ಗಾಯಕವಾಡ

Spread the love

ಬೆಳಗಾವಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಖಾನಾಪುರದ ತಹಶೀಲ್ದಾರ್‌ರನ್ನು ಅಮಾನತುಗೊಳಿಸಲಾಗಿದೆ. ಪ್ರಕಾಶ್​ ಗಾಯಕವಾಡ ಅಮಾನತಾದ ತಹಶೀಲ್ದಾರ್. ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷ್ ಹೆಚ್.​ಜಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಆದಾಯಕ್ಕಿಂತ ಹೆಚ್ಚಿನ ಸಂಪತ್ತು ಹೊಂದಿದ್ದಾರೆ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಜ.7ರಂದು ಪ್ರಕಾಶ್​ ಗಾಯಕವಾಡ ವಿರುದ್ಧ ಬೆಳಗಾವಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜ.8ರಂದು ಇವರ ಬೆಳಗಾವಿ ಮನೆ, ಖಾನಾಪುರದ ಬಾಡಿಗೆ ಮನೆ ಮತ್ತು ತಹಶೀಲ್ದಾರ್ ಕಚೇರಿ,

ನಿಪ್ಪಾಣಿ ಮನೆ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಪ್ರಕಾಶ್, ಬಲ್ಲ ಮೂಲಗಳ ಆದಾಯಕ್ಕಿಂತ 4,09,82,000 ರೂ. ಹೆಚ್ಚಿನ ಆದಾಯ ಹೊಂದಿರುವುದು ದೃಢಪಟ್ಟಿತ್ತು.ಪ್ರಕಾಶ್​ ಸ್ಥಾನಕ್ಕೆ ರವೀಂದ್ರ ಹಾದಿಮನಿ ಅವರನ್ನು ನೇಮಿಸಲಾಗಿದ್ದು, ಖಾನಾಪುರದ ತಹಶೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಮಾನತು ಆದೇಶ ಹೊರಬೀಳುತ್ತಿದ್ದಂತೆ ಪ್ರಕಾಶ್‌ ತಮ್ಮ ಕಚೇರಿಯಿಂದ ಸರ್ಕಾರಿ ವಾಹನದಲ್ಲಿ ಮನೆಯತ್ತ ತೆರಳಿದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ