Breaking News

ತೀವ್ರ ಕೂತುಹಲ ಕೆರಳಿಸಿದ ಬಿಜೆಪಿ ನೊಟೀಸ್: ಯತ್ನಾಳರ ಮುಂದಿನ ನಡೆ ಏನು?

Spread the love

 

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಮತ್ತೆ ನೋಟಿಸ್ ನೀಡಿದೆ. ಆದ್ರೆ ನೊಟೀಸ್ ತಲುಪಿಲ್ಲಾ ಎಂದು ಶಾಸಕ ಯತ್ನಾಳ ವರಾತ ತೆಗೆದಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್‌…

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣವನ್ನು ಮಣಿಸಲು ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಮತ್ತೆ ನೋಟಿಸ್ ಜಾರಿ ಮಾಡಲಾಗಿದೆ‌ ನೋಟಿಸ್ ಗೆ 72 ಗಂಟೆಗಳಲ್ಲೇ ಉತ್ತರಿಸುವಂತೆ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚಿಸಿದ್ದು, ಒಂದು ವೇಳೆ ನಿಗದಿತ ಸಮಯದಲ್ಲಿ ಉತ್ತರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ. ಒಂದು ವೇಳೆ ನಿಗದಿತ ಸಮಯದಲ್ಲಿ ಉತ್ತರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ ಎನ್ನಲಾಗಿದೆ.

ಇನ್ನೂ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಯತ್ನಾಳ್, ನನಗೆ ಅಧಿಕೃತವಾಗಿ ಯಾವುದೇ ನೋಟೀಸು ಬಂದಿರುವುದಿಲ್ಲ. ನೋಟೀಸು ಬಂದಮೇಲೆ ಕೆಲವ್ಯಕ್ತಿಗಳ ಏಕಸ್ವಾಮ್ಯತೆ, ಏಕಪಕ್ಷೀಯ ನಿರ್ಧಾರಗಳು, ಉತ್ತರ ಕರ್ನಾಟಕದ ಕಡೆಗಣನೆ, ಕುಟುಂಬ ರಾಜಕಾರಣ, ಕಾಂಗ್ರೆಸ್ ಪಕ್ಷದ ವೈಫಲ್ಯಗಳನ್ನು ರಾಜ್ಯದ ಜನತೆಗೆ ವಿವರಿಸಲು ವಿಫಲವಾಗಿರುವ ಪಕ್ಷದ ಧೋರಣೆ, ಹೊಂದಾಣಿಕೆ ರಾಜಕೀಯ ಸೇರಿದಂತೆ ಸ್ವಜನಪಕ್ಷಪಾತದ ಬಗ್ಗೆ ವಿವರವಾಗಿ ಲಿಖಿತ ರೂಪದಲ್ಲಿ ಉತ್ತರ ನೀಡುತ್ತೇನೆ ಎಂದಿದ್ದಾರೆ.

ಈ ಹಿಂದೆಯೂ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್‌ ನೀಡಿತ್ತು ಮತ್ತೆ ಅವರು ಉತ್ತರ ಸಹ ನೀಡಿದ್ದರು. ಆದರೆ ವಿಜಯೇಂದ್ರ ವಿರುದ್ಧ ನಿರಂತವಾಗಿ ಹೇಳಿಕೆ ನೀಡುವುದನ್ನು ಮಾತ್ರ ನಿಲ್ಲಿಸಿಲ್ಲ. ಹೀಗಾಗಿ ಇಂದು ಮತ್ತೊಮ್ಮೆ ಯತ್ನಾಳ್ ಅವರಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಲಾಗಿದೆ. ದೆಹಲಿಯಲ್ಲಿದ್ದ ಯತ್ನಾಳ್ ಅವರು ಈಗ ಹೈದರಾಬಾದ್ ನತ್ತ ಪ್ರಯಾಣ ಬೆಳಸಿದ್ದು, ಬಿಜೆಪಿ ಶಿಸ್ತು ಸಮಿತಿ ನೀಡಿದ ನೋಟಿಸ್ ಇನ್ನೂ ಅವರ ಕೈಸೇರಿಲ್ಲ ಎಂದು ತಿಳಿದುಬಂದಿದೆ. ಇಷ್ಟೆ ಅಲ್ಲದೇ ಈ ನೊಟೀಸ್ ಫೇಕ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರದಾಡತೊಡಗಿದೆ‌. ಶಾಸಕ ಯತ್ನಾಳ ಕೂಡಾ ಇಂತಹುದೊಂದು ಪೋಸ್ಟ್ ಷೇರ್ ಮಾಡಿದ್ದಾರೆ.

ಒಟ್ನಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯದ ಭಿನ್ನಮತ ಶಮನಕ್ಕೆ ಕೈ ಹಾಕಿದಂತಾಗಿದೆ‌. ಇನ್ನೂ ಶಾಸಕ ಯತ್ನಾಳರ ನಡೆ ಏನು ಎಂದು ತೀವ್ರ ಕುತೂಹಲ ಕೆರಳಿಸಿದೆ.


Spread the love

About Laxminews 24x7

Check Also

ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ

Spread the love ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ ಇಳಕಲ್ ಹೊರವಲಯದ ರಾಷ್ಟ್ರೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ