ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು.
ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು.