Breaking News

ಬಿಎಂಆರ್​ಸಿಎಲ್​ಗೆ ಸಿಎಂ ಮಹತ್ವದ ಸೂಚನೆ: ಏರಿಕೆಯಾಗಿರುವ ಮೆಟ್ರೋ ದರ ಇಳಿಕೆಯಾಗುತ್ತಾ?

Spread the love

ಬೆಂಗಳೂರು, (ಫೆಬ್ರವರಿ 13): ಬೆಂಗಳೂರಿಗರ ಸಂಚಾರ ಜೀವನಾಡಿಯಾಗಿರುವ ನಮ್ಮ ಮೆಟ್ರೋ ಟಿಕೆಟ್​ ದರ ಏರಿಕೆಯಾಗಿದೆ. ಇದರಿಂದ ಪ್ರಯಾಣಿಕರಿಗೆ ಭಾರೀ ಹೊರೆಯಾಗಿದೆ. ಶೇ.45 ರಿಂದ 50% ದರ ಏರಿಕೆ ಮಾಡಿದ್ದೇವೆ ಎಂದು ಬಿಎಂಆರ್​ಸಿಎಲ್​ ತಿಳಿಸಿದೆ. ಆದ್ರೆ, ಏರಿಕೆ ಅಗಿರುವುದ ಒನ್ ಟು ಡಬಲ್ ಆಗಿದ್ದು, ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗೆ ದರ ಏರಿಕೆಯಲ್ಲಿ ಗೊಂದಲ ನಿರ್ಮಾಣವಾಗಿದ್ದರಿಂದ ಖುದ್ದು ಸಿಎಂ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, ಮೆಟ್ರೋ ಪ್ರಯಾಣ ದರ ಹೆಚ್ಚಳದಲ್ಲಿ ಕೆಲವು ಸ್ಟೇಜ್‌ಗೆ ದುಪ್ಪಟ್ಟು ದರ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರ ಹಿತ ದೃಷ್ಟಿಯಿಂದ ಅದನ್ನು ಕಡಿತ ಮಾಡುವಂತೆ ಬಿಎಂಆರ್​ಸಿಎಲ್​ಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ಮೆಟ್ರೋ ಪ್ರಯಾಣ ದರ ಹೆಚ್ಚಳದಲ್ಲಿ ಕೆಲವು ಸ್ಟೇಜ್‌ಗಳಿಗೆ ಯಥೇಚ್ಚ ದರ ಏರಿಕೆಯಾಗಿದೆ. ಆ ದರವನ್ನು ಇಳಿಕೆ ಮಾಡುವಂತೆ  ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯನವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.


Spread the love

About Laxminews 24x7

Check Also

ಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ ಹೆಚ್ಚು.

Spread the loveಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ