Breaking News

ಆಕಸ್ಮಿಕವಾಗಿ ಗುಂಡು ತಗುಲಿ ಬೆಳಗಾವಿ ಯೋಧ ಸಾವು

Spread the love

ಬೆಳಗಾವಿ: ಭಾರತೀಯ ನೌಕಾಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಬೆಳಗಾವಿ ಜಿಲ್ಲೆಯ ಯೋಧ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ಇಂದು ನಡೆದಿದೆ.

ಮೂಡಲಗಿ ತಾಲೂಕಿನ ಕಲ್ಲೋಳಿಯ ಸುಭಾಷ ಖಾನಗೌಡ್ರ (24) ಮೃತಪಟ್ಟ ಯೋಧ.‌ ಇವರು ಕಳೆದ ಐದು ವರ್ಷಗಳಿಂದ ನೌಕಾಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುರುವಾರ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.2020ರಲ್ಲಿ ನೌಕಾಪಡೆಗೆ ನೇಮಕಾತಿ ಹೊಂದಿದ್ದ ಸುಭಾಷ ಅವರು ಕೇರಳದ ಕೊಚ್ಚಿಯಲ್ಲಿ ತರಬೇತಿ ಪಡೆದಿದ್ದರು. ನಂತರ ಅಂಡಮಾನ್ ಹಾಗೂ ಸದ್ಯ ಚೆನ್ನೈನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶುಕ್ರವಾರ ಕಲ್ಲೋಳಿ ಪಟ್ಟಣದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ