Breaking News

ಚಲಿಸುತ್ತಿದ್ದ ರೈಲಿನಿಂದ ತಳ್ಳಿ ವ್ಯಕ್ತಿಯ ಹತ್ಯೆ

Spread the love

ಬೆಂಗಳೂರು : ಕುಳಿತುಕೊಳ್ಳುವ ವಿಚಾರಕ್ಕೆ ಜಗಳವಾಗಿ ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯನ್ನು ತಳ್ಳಿ ಹತ್ಯೆ ಮಾಡಿದ ಆರೋಪದ ಮೇಳೆ ಇಬ್ಬರು ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ರೈಲ್ವೇ ಪೊಲೀಸರು ಸೆರೆಹಿಡಿದಿದ್ದಾರೆ.

ಕಲಬುರಗಿ ಜಿಲ್ಲೆಯ ಸೇಡಂ ಮೂಲದ ದೇವಪ್ಪ (45) ಹಾಗೂ ಪೀರಪ್ಪ (31) ಬಂಧಿತ ಆರೋಪಿಗಳು. ಚನ್ನರಾಯಪಟ್ಟಣ ಹಿರೇಸಾವೆಯ ಕುಮಾರ್ (28) ಹತ್ಯೆಯಾದ ವ್ಯಕ್ತಿ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೇ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಪೊಲೀಸರು ಹೇಳಿದ್ಧೇನು ? ಫೆ. 11ರಂದು ಯಶವಂತಪುರ-ಬೀದರ್ ಎಕ್ಸ್​ಪ್ರೆಸ್​​ ರೈಲಿನ ಸಾಮಾನ್ಯ ಬೋಗಿಯಲ್ಲಿ ಕುಮಾರ್ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರ ದಟ್ಟಣೆ ಹಿನ್ನೆಲೆಯಲ್ಲಿ ರೈಲಿನ ಶೌಚಾಲಯದ ಬಳಿ ಕುಳಿತುಕೊಳ್ಳಲು ಹೋಗಿದ್ದರು. ಆದರೆ, ಆರೋಪಿಗಳು ಆತನಿಗೆ ಜಾಗ ಮಾಡಿಕೊಡದೆ, ಜಗಳ ಮಾಡಿದ್ದರು. ಗಲಾಟೆ ವಿಕೋಪಕ್ಕೆ ಹೋಗಿ ಕುಳಿತುಕೊಳ್ಳಲು ಬರುತ್ತೀಯಾ ಎಂದು ಕ್ಯಾತೆ ತೆಗೆದು ಚಲಿಸುತ್ತಿದ್ದ ರೈಲಿನಿಂದ ಹೊರದಬ್ಬಿದ್ದಾರೆ. ಈ ಸಂಬಂಧ ರೈಲ್ವೇ ಕಂಟ್ರೋಲ್ ರೂಮ್​ಗೆ ಬಂದ ಮಾಹಿತಿ ಆಧರಿಸಿ ಫೆ. 12ರಂದು ಪರಿಶೀಲಿಸಿದಾಗ ಯಲಹಂಕ-ಗೌರಿಬಿದನೂರು ಮಾರ್ಗದ ಮಧ್ಯೆ ಶವ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ದೊಡ್ಡಬಳ್ಳಾಪುರದಲ್ಲಿ ಬಂಧಿಸಲಾಗಿದೆ. ದೇವಪ್ಪ ಗಾರ್ಡನ್ ಕೆಲಸ ಮಾಡುತ್ತಿದ್ದರೆ, ಮತ್ತೋರ್ವ ಆರೋಪಿ ಪೀರಪ್ಪ ಪೇಂಟಿಂಗ್ ಕೆಲಸ ಮಾಡುತ್ತಿದ್ದ ಎಂದು ರೈಲ್ವೇ ಎಸ್​​ಪಿ ಡಾ. ಸೌಮ್ಯಲತಾ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ