Breaking News

ಹಾಸನ: ಮುಖದ ಮೇಲೆ ಕಲ್ಲು ಎತ್ತಿಹಾಕಿ ಅಪರಿಚಿತ ಮಹಿಳೆಯ ಭೀಕರ ಕೊಲೆ

Spread the love

ಹಾಸನ: ಅಪರಿಚಿತ ಮಹಿಳೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರೈಲ್ವೆ ನಿಲ್ದಾಣದ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.

ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಸುಮಾರು 40 ವರ್ಷ ವಯಸ್ಸಿನ ಮಹಿಳೆಯಾಗಿದ್ದಾರೆ. ರಾಜಘಟ್ಟದ ರೈಲು ನಿಲ್ದಾಣದ ಪಕ್ಕದಲ್ಲಿ ರೈಲ್ವೆ ಇಲಾಖೆಯ ಕಾಮಗಾರಿ ನಡೆಯುತ್ತಿದ್ದು, ಕಟ್ಟಡದ ಒಳಗಡೆ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೆಲಸಕ್ಕೆ ಬಂದ ಕಾರ್ಮಿಕರು ಕಾಮಗಾರಿ ನಡೆಯುತ್ತಿದ್ದ ಕಟ್ಟಡದ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಯಾವುದೇ ಗುರುತು ಸಿಗಬಾರದು ಎಂಬ ಉದ್ದೇಶದಿಂದ ಉದ್ದೇಶದಿಂದ ಆಕೆಯ ಮುಖದ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

ಸ್ಥಳಕ್ಕೆ ಹಾಸನ ನಗರದ ಬಡಾವಣೆ ಠಾಣೆ ಪೊಲೀಸರು ಮತ್ತು ರೈಲ್ವೆ ಎಸ್​​​​ಪಿ ಸೌಮ್ಯಲತಾ ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ರೈಲ್ವೆ ಎಸ್​​​​ಪಿ ಮಾಹಿತಿ: ”ರೈಲ್ವೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಯಿತು. ಮುಖಕ್ಕೆ ಕಲ್ಲಿನಿಂದ ಜಜ್ಜಲಾಗಿದೆ. ಗುರುತು ಸಿಗಬಾರದೆಂದು ಹೀಗೆ ಮಾಡಲಾಗಿದೆ. ಮಹಿಳೆ ಯಾರೆಂಬುದು ಇನ್ನೂ ಗುರುತು ಪತ್ತೆಯಾಗಿಲ್ಲ. ನಿರ್ಮಾಣ ಹಂತದ ಕಾಮಗಾರಿ ಆಗಿರುವುದರಿಂದ ಯಾವುದೇ ಸೆಕ್ಯೂರಿಟಿ ಗಾರ್ಡ್​ಗಳು ಕಾರ್ಯ ನಿರ್ವಹಿಸುತ್ತಿರಲಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ರೈಲ್ವೆ ಎಸ್​​​​ಪಿ ಸೌಮ್ಯಲತಾ ಮಾಹಿತಿ ಹಂಚಿಕೊಂಡಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ