Breaking News

ಬಿಯರ್‌ ಕ್ಯಾನ್‌ನಲ್ಲಿ ಮಹಾತ್ಮ ಗಾಂಧೀಜಿ ಫೋಟೋ ಮುದ್ರಿಸಿದ ಮದ್ಯ ಕಂಪನಿ

Spread the love

ದೇಶವನ್ನು ಬ್ರಿಟೀಷರ ದಾಸ್ಯದಿಂದ ಮುಕ್ತಗೊಳಿಸುವುದರ ಜೊತೆಗೆ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದವರು ಗಾಂಧೀಜಿ. ಆದ್ರೆ ಇಲ್ಲೊಂದು ಮದ್ಯ ಕಂಪೆನಿ ತನ್ನ ಬಿಯರ್‌ ಕ್ಯಾನ್‌ಗಳಲ್ಲಿ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದ ಗಾಂಧೀಜಿಯವರ ಫೋಟೋವನ್ನು ಪ್ರಿಂಟ್‌ ಮಾಡಿಸಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಬಿಯರ್‌ ಕ್ಯಾನ್‌ನಲ್ಲಿ ಮಹಾತ್ಮ ಗಾಂಧೀಜಿ ಫೋಟೋ ಕಂಡು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬ್ರಿಟೀಷರ ದಾಸ್ಯದಿಂದ ದೇಶವವನ್ನು ಮುಕ್ತಗೊಳಿಸುವುದರ ಜೊತೆಗೆ ಪ್ರತಿಯೊಂದು ಕುಟುಂಬದ ಉತ್ತಮ ಬದುಕಿಗಾಗಿ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧ ಮಾಡಲು ದೊಡ್ಡ ಆಂದೋಲನವನ್ನೇ ಮಾಡಿದವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ. ಆದ್ರೆ ಇದೀಗ ಗಾಂಧೀಜಿಯವರಿಗೆ ಅವಮಾನ ಮಾಡುವಂತಹ ಘಟನೆಯೊಂದು ನಡೆದಿದೆ. ಹೌದು ಇಲ್ಲೊಂದು ಮದ್ಯ ಕಂಪೆನಿ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದ ಗಾಂಧೀಜಿ ಅವರ ಭಾವಚಿತ್ರವನ್ನೇ ಬಿಯರ್‌ ಕ್ಯಾನ್‌ನಲ್ಲಿ ಪ್ರಿಂಟ್‌ ಮಾಡಿಸಿದೆ. ಈ ಕುರಿತ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ಈ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ