
ಬೆಳಗಾವಿ : ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ವ್ಯಕ್ತಿಯೊಬ್ಬನಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಹುಕ್ಕೇರಿ ತಾಲ್ಲೂಕಿನ ಬೊಳಶ್ಯಾನಟ್ಟಿ ಗ್ರಾಮದ ಶಂಕರ ಕೊಂಕಣಿ ಮೃತ ವ್ಯಕ್ತಿ.
ಸಮೀಪದ ಏಕಸ್ ಕಂಪನಿ ಸಮೀಪದಲ್ಲಿ ಘಟನೆ ನಡೆದಿದ್ದು, ಬೆಳಗಾವಿಯಿಂದ ಸಂಕೇಶ್ವರ ಕಡೆಗೆ ಹೊರಟ್ಟಿದ್ದ ಕಾರ್ ಡಿಕ್ಕಿ ಹೊಡೆದಿದೆ.
ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.