Breaking News

ಹಾಡುಹಕ್ಕಿ ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ನಿಧನ.

Spread the love

ಉತ್ತರ ಕನ್ನಡ : ಜನಪದ ಕೋಗಿಲೆ ಎಂದೇ ಹೆಸರು ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ನಾಡೋಜಾ ಸುಕ್ರಿ ಬೊಮ್ಮಗೌಡ (91) ವಯೋ ಸಹಜ ಕಾಯಿಲೆಯಿಂದಾಗಿ ಇಂದು ಸ್ವ ಗೃಹದಲ್ಲಿ ನಿಧನ ಹೊಂದಿದ್ದಾರೆ.

2017 ರಲ್ಲಿ ಜನಪದ ಹಾಡಿನ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ. ರಾಜ್ಯ, ರಾಷ್ಟ್ರದ ಹಲವು ಪ್ರಶಸ್ತಿ ಪಡೆದಿದ್ದ ಇವರು ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಹಾಸಿಗೆ ಹಿಡಿದಿದ್ದರೂ. ತೀವ್ರ ಉಸಿರಾಟ ಸಮಸ್ಯೆ ಹೊಂದಿದ್ದ ಇವರು ಕೆಲವು ದಿನದ ಹಿಂದೆ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಮರಳಿ ಬಂದಿದ್ದರು‌.

ಆದರೆ ಇಂದು ಮುಂಜಾನೆ ನಿಧನ ಹೊಂದಿದ್ದು, ಇಬ್ಬರು ಮೊಮ್ಮೊಕ್ಕಳು , ಓರ್ವ ಸೊಸೆಯನ್ನು ಅಗಲಿದ್ದಾರೆ.ಜಾನಪದ‌ ಹಾಡುಗಳ ಮೂಲಕ ಸಮುದಾಯದ ಮಹಿಳೆಯ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದ ಸುಕ್ರಜ್ಜಿ. ಅನೇಕ ಹೋರಾಟಗಳ ಮುಂಚೂಣಿ ಯಲ್ಲಿ ಇರುತ್ತಿದ್ದರು.

 


Spread the love

About Laxminews 24x7

Check Also

ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ

Spread the loveಉತ್ತರಕನ್ನಡ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ