Breaking News

ಶಿಂದೋಳಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ ಮೃಣಾಲ ಹೆಬ್ಬಾಳಕರ್.

Spread the love

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳಿ ಗ್ರಾಮದಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಗ್ರಾಮಸ್ಥರ ಸಮ್ಮುಖದಲ್ಲಿ ಚಾಲನೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಈ ಹಿಂದೆ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಜಾತ್ರೆಯ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಮಂಜೂರು ಮಾಡಿಸಲಾಗಿದೆ.

ಸುಮಾರು 15 ವರ್ಷಗಳ ಬಳಿಕ ಜಾತ್ರೆ ನಡೆಯುತ್ತಿದ್ದು, ಜಾತ್ರೆಗೆ ಬೇಕಾಗಿರುವ ಸಕಲ ಸಹಕಾರ ಕೊಡುವುದಾಗಿ ಭರವಸೆ ನೀಡಲಾಗಿದೆ‌. ಜಾತ್ರೆ ಹತ್ತಿರದಲ್ಲಿರುವ ಕಾರಣ ನಿಗದಿತ ಸಮಯದಲ್ಲಿ ಗುಣಮಟ್ಟದ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ.

 


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ರೆಡ್ ಜೋನ್ ಘೋಷಣೆ

Spread the love ಬೆಳಗಾವಿ: ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣದ 8 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (Red …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ