Breaking News

ರೈತರ ಬಾಯಿಗೆ ಕುಮಾರಸ್ವಾಮಿ ಮಣ್ಣು ಹಾಕೋ ಕೆಲಸ ಮಾಡಿದ್ರು. ಅವರು ಒಬ್ಬ ಡೀಲಿಂಗ್ ಮಾಸ್ಟರ್: ಕೋಡಿಹಳ್ಳಿ ಚಂದ್ರಶೇಖರ್:

Spread the love

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ರೈತರು ಮಣ್ಣಿನ ಮಗ ಅಂತಾರೆ. ಆದ್ರೇ ರೈತರ ಬಾಯಿಗೆ ಕುಮಾರಸ್ವಾಮಿ ಮಣ್ಣು ಹಾಕೋ ಕೆಲಸ ಮಾಡಿದ್ರು. ಅವರಿಗೆ ರೈತರ ಪರ ಕಾಳಜಿಯೇ ಇಲ್ಲ. ಕುಮಾರಸ್ವಾಮಿ ಮಣ್ಣಿನ ಮಕ್ಕಳ ದ್ರೋಹಿ ಹಾಗೂ ಅವರು ಒಬ್ಬ ಡೀಲಿಂಗ್ ಮಾಸ್ಟರ್ ಎಂಬುದಾಗಿ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ.

ನಗರದಲ್ಲಿ ವಿಧಾನಸೌಧ ಮುತ್ತಿಗೆ ಪ್ರತಿಭಟನೆ ಚಳುವಳಿ ನಡೆಸುತ್ತಾ ಮಾಜಿ ಸಿಎಂ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ಜೆಡಿಎಸ್ ಬೆಂಬಲ ವಿಚಾರವಾಗಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಶಾಸಕರನ್ನೇ ಮಾರಾಟ ಮಾಡಿದ್ದಾರೆ. ಡೀಲ್ ಮಾಡೋದ್ರಲ್ಲಿ ನಿಸ್ಸೀಮರು. ಸರ್ಕಾರದ ಜೊತೆಗೆ ಹೆಚ್ ಡಿ ಕುಮಾರಸ್ವಾಮಿ ಡೀಲ್ ಮಾಡ್ಕೊಂಡಿದ್ದಾರೆ. ದೇವೇಗೌಡರ ರೈತರ ಕಾಳಜಿ ಬಗ್ಗೆ ಗೌರವ ಇದೆ ಎಂದರು.

ಇನ್ನೂ ಮುಂದುವರೆದು ಮಾತನಾಡಿದ ಅವರು, ಕುಮಾರಸ್ವಾಮಿಯವರನ್ನು ಮಣ್ಣಿನ ಮಕ್ಕಳು ಅಂತಾರೆ. ಆದ್ರೇ ಅಂತವರೇ ರೈತರ ಬಾಯಿಗೆ ಮಣ್ಣು ಹಾಕೋ ಕೆಲಸ ಮಾಡಿದ್ರು. ರೈತರ ಪರ ಕಾಳಜಿಯೇ ಇಲ್ಲ. ಕುಮಾರಸ್ವಾಮಿ ಮಣ್ಣಿನ ಮಕ್ಕಳ ದ್ರೋಹಿ. ಅವರದ್ದು ಏನಿದ್ದರೂ ಪುಟಗೋಸಿ ರಾಜಕಾರಣ ಎಂಬುದಾಗಿ ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Spread the love ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ