Breaking News

ವಿಧಾನಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡದ ವಿಚಾರದ ಕುರಿತಂತೆ ಶಾಸಕ ಹರ್ಷವರ್ಧನ್ ಪ್ರಸ್ತಾಪ

Spread the love

ಬೆಂಗಳೂರು : ಕೆಎಸ್ಆರ್ ಟಿಸಿ, ಬಿಎಂಟಿಸಿ ನೌಕರರಿಗೆ ಡಿಸೆಂಬರ್ ತಿಂಗಳ ಸಂಬಳವನ್ನು 10 ದಿನದೊಳಗೆ ನೀಡುತ್ತೇವೆ ಎಂದು ಸಾರಿಗೆ ಸಚಿವ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ವಿಧಾನಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಸಾರಿಗೆ ನೌಕರರಿಗೆ ಸಂಬಳ ನೀಡದ ವಿಚಾರದ ಕುರಿತಂತೆ ಶಾಸಕ ಹರ್ಷವರ್ಧನ್ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಲಕ್ಷ್ಮಣ ಸವದಿ ನವೆಂಬರ್ ತಿಂಗಳ ತನಕ ಎಲ್ಲಾ ನೌಕರರಿಗೆ ಸಂಬಳ ನೀಡಲಾಗಿದೆ. ಡಿಸೆಂಬರ್ ತಿಂಗಳ ಸಂಬಳವನ್ನು 8 ರಿಂದ 10 ದಿನದೊಳಗೆ ನೀಡಲಾಗುವುದು ಎಂದು ಹೇಳಿದ್ದಾರೆ.

ಇನ್ನು ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಮಾಡುವಂತೆ ಶಾಸಕ ಜಿ.ಟಿ. ದೇವೇಗೌಡ ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ. ಈಗಿರುವ ಆರ್ಥಿಕ ಪರಿಸ್ಥಿತಿಯಲ್ಲಿ ಅವರ ಬೇಡಿಕೆ ಈಡೇರಿಸಲು ಕಷ್ಟವಾಗಲಿದೆ ಎಂದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ