ಗಂಗಾವತಿ (ಕೊಪ್ಪಳ) : ಸ್ನೇಹಿತರೊಂದಿಗೆ ರಜೆ ಕಳೆಯಲು ಆಗಮಿಸಿದ್ದ ತೆಲಂಗಾಣದ ಖಾಸಗಿ ಆಸ್ಪತ್ರೆಯ ವೈದ್ಯೆವೊಬ್ಬರು ಈಜಲು ಹೋಗಿ ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ತಾಲೂಕಿನ ಸಣಾಪುರದ ಬಳಿ ಸಂಭವಿಸಿದೆ. ನೀರಿನಲ್ಲಿ ನಾಪತ್ತೆಯಾಗಿರುವ ವೈದ್ಯೆಯನ್ನು ಹೈದರಾಬಾದ್ನ ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯ ಮೋಹನ್ ರಾವ್ ಎಂದು ಗುತಿಸಲಾಗಿದೆ.
ಇವರು ಹೈದರಾಬಾದ್ನ ವಿಕೆಸಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಕಳೆಯಲು ತಮ್ಮ ಸ್ನೇಹಿತರಾದ ಅಶಿತಾ ಮತ್ತು ಸಾತ್ವಿಕ್ ಜೊತೆ ಅನನ್ಯ ಅವರು ಸಣಾಪುರ ಸಮೀಪ ಇರುವ ಖಾಸಗಿ ಗೆಸ್ಟ್ಹೌಸ್ಗೆ ಮಂಗಳವಾರ ಸಂಜೆ ಬಂದಿಳಿದಿರುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
ಈ ಗೆಸ್ಟ್ ಹೌಸ್ ಹಿಂದೆ ಇರುವ ತುಂಗಭದ್ರಾ ನದಿಯಲ್ಲಿ ಈ ಮೂವರು ಈಜಲು ಹೋಗಿದ್ದರು. ಈ ಪೈಕಿ ಅನನ್ಯ, ನದಿಯಲ್ಲಿ ಈಜಲು ಸಮೀಪದ ಬಂಡೆಯೊಂದರ ಮೇಲಿಂದ ನೀರಿಗೆ ಜಿಗಿದಿದ್ದಾರೆ. ನದಿಯಲ್ಲಿನ ನೀರಿನ ಸೆಳೆತದಿಂದ ಕೊಚ್ಚಿ ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Laxmi News 24×7