Breaking News

ಭೂ ಸುಧಾರಣೆ ಕಾಯ್ದೆ ಖಂಡಿಸಿ ಅನ್ನದಾತರು ನಗರದಲ್ಲಿಂದು ಬಾರುಕೋಲು ಚಳವಳಿ ನಡೆಸುವ ಮೂಲಕ ಸರ್ಕಾರದ ವಿರುದ್ಧ ಕಿಡಿ

Spread the love

ಬೆಂಗಳೂರು, ಡಿ.9- ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳು, ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ಖಂಡಿಸಿ ಅನ್ನದಾತರು ನಗರದಲ್ಲಿಂದು ಬಾರುಕೋಲು ಚಳವಳಿ ನಡೆಸುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದರು.

ರಾಜ್ಯದ ವಿವಿಧ ಭಾಗಗಳಿಂದ ಹಸಿರು ಶಾಲು ಹೊದ್ದು ಕೈಯಲ್ಲಿ ಬಾರುಕೋಲು ಹಿಡಿದು ಬಂದಿದ್ದ ಸಾವಿರಾರು ರೈತರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಜಮಾವಣೆಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋ ಧೋರಣೆ ಖಂಡಿಸಿ ಕ್ಕಾರದ ಘೋಷಣೆಗಳನ್ನು ಕೂಗಿದರು

ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ರೈತ ವಿರೋ, ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಲಿವೆ. ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಬಾರುಕೋಲು ಹಿಡಿದು ರೈಲ್ವೆ ನಿಲ್ದಾಣದಿಂದ ಆನಂದರಾವ್ ವೃತ್ತದ ಮೂಲಕ ಮೆರವಣಿಗೆಯಲ್ಲಿ ಸಾಗಿ ವಿಧಾನಸೌಧ ಮುತ್ತಿಗೆ ಹಾಕಲು ಮುಂದಾದಾಗ ಮಾರ್ಗಮಧ್ಯೆ ಫ್ರೀಡಂಪಾರ್ಕ್ ಬಳಿಯೇ ಪೊಲೀಸರು ತಡೆದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸರ್ಕಾರಗಳು ದಪ್ಪ ಚರ್ಮದ ಸರ್ಕಾರಗಳಾಗಿವೆ. ದಾರಿ ತಪ್ಪುತ್ತಿರುವ ಈ ಸರ್ಕಾರಗಳನ್ನು ನಾವು ಬಾರುಕೋಲು ಮೂಲಕ ಸರಿದಾರಿಗೆ ತರಬೇಕಿದೆ.ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಮುಂದಾಗಿರುವ ಸರ್ಕಾರಕ್ಕೆ ನಾವು ಎಚ್ಚರಿಕೆ ನೀಡಿದ್ದೇವೆ. ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಭೂ ಸುಧಾರಣಾ ಕಾಯ್ದೆಯನ್ನು ರಾಜ್ಯ ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಸರ್ಕಾರದ ಬುಡ ಅಲುಗಾಡುತ್ತದೆ ಎಂಬ ಎಚ್ಚರಿಕೆ ನೀಡಿದರು.ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ