Breaking News

ಯಲ್ಲಾಪುರ ಬಳಿ ಲಾರಿ ಡಿಕ್ಕಿ: ಕಾರಲ್ಲಿದ್ದ ಪತಿ – ಪತ್ನಿ ಮತ್ತು ಏಳು ತಿಂಗಳ ಮಗ ಸಾವು

Spread the love

ಕಾರವಾರ: ಲಾರಿ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪತಿ, ಪತ್ನಿ ಮತ್ತು 7 ತಿಂಗಳ ಮಗ ಸೇರಿದಂತೆ ಮೂವರು ಸಾವನ್ನಪ್ಪಿದ ದಾರುಣ ಘಟನೆ ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಬುಧವಾರ ನಡೆದಿದೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೊಪ್ಪಳ ಮೂಲಕ ಶ್ರೀಕಾಂತ ರೆಡ್ಡಿ (37), ಅವರ ಪತ್ನಿ ಚೈತ್ರಾ ಆರ್(31) ಹಾಗೂ ಅವರ 7 ತಿಂಗಳ ಮಗು ಶ್ರೀಹಾನ್ ಅಪಘಾತದಲ್ಲಿ ಮೃತಟಪಟ್ಟವರು. ಕಾರು ಚಾಲಕ ಆರ್ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಲ್ಲಿ ಇವರು ಕುಟುಂಬ ಸಮೇತರಾಗಿ ಅಂಕೋಲಾದಿಂದ ಹುಬ್ಬಳ್ಳಿ ಕಡೆ ಹೊರಟ್ಟಿದ್ದರು. ಈ ವೇಳೆ ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಅಪಘಾತ ಸಂಭವಿಸಿದೆ.

ಲಾರಿ ಚಾಲಕ ವೇಗವಾಗಿ ಬಂದು ಅರಬೈಲ್ ಮಾರುತಿ ದೇವಾಲಯದದಿಂದ ಸ್ವಲ್ಪ ಮುಂದೆ ನಿಯಂತ್ರಣ ತಪ್ಪಿ ಬಲಕ್ಕೆ ಹೊರಳಿದೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರಿಗೆ ರಭಸವಾಗಿ ಲಾರಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಬಿಜಾಪುರದ ಪ್ರಶಾಂತ ಕುಂಬಾರ ಎಂಬಾತನೇ ಲಾರಿ ಚಾಲಕ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ