ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಮತ್ತು ಕೃಷಿ ಮಾರುಕಟ್ಟೆ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್ ರವರ ಉಪಸ್ಥಿತಿಯಲ್ಲಿ ವಿಕಾಸಸೌಧದಲ್ಲಿ ಇಂದು ಸಕ್ಕರೆ ಕಾರ್ಖಾನೆಗಳ ನೌಕರರ ವೇತನ ಪರಿಷ್ಕರಣೆಯ ತ್ರಿಪಕ್ಷೀಯ ವೇತನ ಸಭೆ ನಡೆಯಿತು.
ಸಭೆಯಲ್ಲಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳಾದ ಎನ್. ವಿ. ಪ್ರಸಾದ್, ಕಾರ್ಮಿಕ ಆಯುಕ್ತರಾದ ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತರಾದ ರವಿಕುಮಾರ್ ಸಕ್ಕರೆ ಕಾರ್ಖಾನೆಗಳ ನೌಕರ ವರ್ಗದ ಪ್ರಮುಖರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.