ಬೆಂಗಳೂರು: ಸುಗಮ ಮತ್ತು ಸುರಕ್ಷಿತ ರಸ್ತೆ ಖಾತರಿ ನಿಟ್ಟಿನಲ್ಲಿ ಬಿಬಿಎಂಪಿಯು ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ”ದ ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ
ನಮ್ಮ ರಸ್ತೆ ಕೈಪಿಡಿಯ ಬಿಡುಗಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್, ಡಿಸಿಎಂ ಕಾರ್ಯದರ್ಶಿ, ಬಿ ಎಂ ಆರ್ ಡಿ ಎ ಆಯುಕ್ತ ರಾಜೇಂದ್ರ ಚೋಳನ್, ಇಂಜಿನಿಯರ್ ಇನ್ ಚೀಫ್ ಬಿ ಎಸ್ ಪ್ರಹ್ಲಾದ್, ಡಬ್ಲ್ಯೂ ಆರ್ ಐ ಇಂಡಿಯಾದ ಮಾಧವ ಪೈ, ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೊ. ಆಶೀಸ್ ವರ್ಮಾ, ನಗರ ತಜ್ಞ ಆರ್ ಕೆ ಮಿಶ್ರ, ನರೇಶ್ ನರಸಿಂಹನ್ ಮತ್ತಿತರರು ಉಪಸ್ಥಿತರಿದ್ದರು.