Breaking News

ಸರ್ಕಾರಿ ಕಚೇರಿಯಲ್ಲೇ ಬೆಡ್ ರೂಂ; ಕಾರವಾರದ ಪ್ರವಾಸೋದ್ಯಮ ಅಧಿಕಾರಿ ಅಮಾನತು

Spread the love

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಪ್ರವಾಸೋದ್ಯಮ ಅಧಿಕಾರಿಯಿಂದ ಕಚೇರಿಯಲ್ಲೇ ಬೆಡ್ ರೂಂ ಮಾಡಿಕೊಂಡ ಆರೋಪ ಕೇಳಿಬಂದಿತ್ತು. ಈ ಘಟನೆಯ ಬಗ್ಗೆ ಟಿವಿ9 ವರದಿಯನ್ನೂ ಮಾಡಿತ್ತು.

 ಪ್ರವಾಸೋದ್ಯಮ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಪ್ರವಾಸೋದ್ಯಮ ಉಪ ನಿರ್ದೇಶಕ ಜಯಂತ್ ತಮ್ಮ ಕಚೇರಿಯಲ್ಲೇ ಬೆಡ್ ರೂಂ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ.

ನನಗೂ ಜಯಂತ್ ಎಂಬ ಅಧಿಕಾರಿ ಬಗ್ಗೆ ಮಾಹಿತಿ ಬಂದಿದೆ. ಇಂಥ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲ. ಹೀಗಾಗಿ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರ ಜೊತೆ ಮಾತಾಡಿದ್ದೇನೆ. ಕಾರವಾರದ ಅಧಿಕಾರಿ ಜಯಂತ್ ಅವರನ್ನು ಅಮಾನತು ಮಾಡುವಂತೆ ಸೂಚಿಸಿದ್ದೇನೆ ಎಂದು ವಿಧಾನಸೌಧದಲ್ಲಿ ಪ್ರವಾಸೋದ್ಯಮ ಸಚಿವ ಹೆಚ್​.ಕೆ. ಪಾಟೀಲ್ ಹೇಳಿದ್ದಾರೆ.

ಕಾರವಾರ ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ ಶಿಫ್ಟಿಂಗ್ ವೇಳೆ ಕಚೇರಿಯ ಒಂದು ಕೋಣೆಯಲ್ಲಿ ಬೆಡ್ ರೂಂನಲ್ಲಿರುವ ರೀತಿಯ ಮಂಚ, ಹಾಸಿಗೆ ಪತ್ತೆ ಆಗಿತ್ತು. ಈ ಕುರಿತು ವಿಡಿಯೋ ಸಮೇತ ಟಿವಿ9 ಸುದ್ದಿ ಪ್ರಸಾರ ಮಾಡಿತ್ತು.  ಪ್ರಸಾರ ಆಗುತ್ತಿದ್ದಂತೆ ಈ ಬಗ್ಗೆ ವಿವರವಾದ ಮಾಹಿತಿ ಪಡೆದಿರುವ ಸಚಿವ ಹೆಚ್​.ಕೆ. ಪಾಟೀಲ್ ಆ ಅಧಿಕಾರಿಯನ್ನು ತಕ್ಷಣ ಅಮಾನತು ಮಾಡುವಂತೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಿಗೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ