Breaking News

ಹುಬ್ಬಳ್ಳಿ-ಗೋವಾ ರೈಲು ಸಂಪರ್ಕ ಕಡಿತ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್

Spread the love

ಹುಬ್ಬಳ್ಳಿ: ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹಾಗೂ ಗೋವಾ ನಡುವೆ ರೈಲು ಸಂಪರ್ಕ ಭಾಗಶಃ ಕಡಿತಗೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್​​​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ತಿಳಿಸಿದ್ದಾರೆ.

ರೈಲ್ವೆ ಹಳಿ ಕಾಮಗಾರಿ ಕಾರಣದಿಂದಾಗಿ ಹುಬ್ಬಳ್ಳಿ ಹಾಗೂ ವಾಸ್ಕೋಡಗಾಮಾ ನಡುವೆ ಸಂಚರಿಸುವ ಕೆಲವು ರೈಲುಗಳ ಸಂಚಾರವನ್ನು ಏಪ್ರಿಲ್ ಮಧ್ಯಭಾಗದವರೆಗೆ ಭಾಗಶಃ ರದ್ದುಗೊಳಿಸಲಾಗಿದೆ. ಅವುಗಳ ಪೈಕಿ ಶಾಲಿಮಾರ್​​​ನಿಂದ ವಾಸ್ಕೋಡಿಗಾಮಾಕ್ಕೆ ಹೋಗಬೇಕಾದ ಅಮರಾವತಿ ಎಕ್ಸ್​ಪ್ರೆಸ್ ರೈಲು ಸಂಚಾರವನ್ನು ಹುಬ್ಬಳ್ಳಿಗೆ ಮೊಟಕುಗೊಳಿಸಲಾಗಿದೆ. ಈ ರೈಲು ವಾರದಲ್ಲಿ ನಾಲ್ಕು ದಿನ ಅಂದರೆ ಸೋಮವಾರ, ಮಂಗಳವಾರ, ಗುರುವಾರ ಹಾಗೂ ಶನಿವಾರ ಶಾಲಿಮಾರ್​​ನಿಂದ ಹುಬ್ಬಳ್ಳಿಗೆ ಆಗಮಿಸುತ್ತದೆ.

ಎಲ್ಲಿಂದ ಹೊರಡಲಿವೆ ಬಸ್​​ಗಳು?: ಶಾಲಿಮಾರ್​​ನಿಂದ ಹಾಗೂ ಮಾರ್ಗ ಮಧ್ಯದ ವಿವಿಧ ಸ್ಥಳಗಳಿಂದ ಈ ರೈಲಿನ ಮೂಲಕ ಹುಬ್ಬಳ್ಳಿಯವರೆಗೆ ಆಗಮಿಸಿ ಗೋವಾಕ್ಕೆ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಹುಬ್ಬಳ್ಳಿಯಿಂದ ಪಣಜಿ, ವಾಸ್ಕೋ, ಮಡಗಾಂವ ಮತ್ತಿತರ ಸ್ಥಳಗಳಿಗೆ ನೇರ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಬಸ್​​ಗಳು ಹುಬ್ಬಳ್ಳಿಯ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡಲಿವೆ.


Spread the love

About Laxminews 24x7

Check Also

ಬೈಕ್​ ಡಿಕ್ಕಿ ಹೊಡೆದ ಪರಿಣಾಮ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ.

Spread the loveಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ