Breaking News

ವ್ಹೀಲ್ ಚೇರ್​ನಲ್ಲಿ ಸಿಎಂ ಸಿದ್ದರಾಮಯ್ಯ ಓಡಾಟ ಈ ಬಾರಿ ಕುಳಿತೇ ಬಜೆಟ್ ಮಂಡಿಸುವ ಸಾಧ್ಯತೆ

Spread the love

ಬೆಂಗಳೂರು: ಮೊಣಕಾಲು ನೋವಿನ ಕಾರಣ ಕಳೆದ 20 ದಿನಗಳಿಂದ ಸಿಎಂ ಸಿದ್ದರಾಮಯ್ಯ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದಾರೆ. ಅವರ ಮೊಣಕಾಲಿಗೆ ಬೆಲ್ಟ್ ಹಾಕಲಾಗಿದೆ. ವೈದ್ಯರ ಸಲಹೆಯಂತೆ ಓಡಾಟ ನಿಲ್ಲಿಸಿದ್ದಾರೆ. ಇನ್ನೂ ಆರು ವಾರ ವಿಶ್ರಾಂತಿ ಪಡೆಯಲು ಸಲಹೆ ನೀಡಲಾಗಿದ್ದು, ಈ ಬಾರಿ ತಮ್ಮ 16ನೇ ಆಯವ್ಯಯವನ್ನು ಬಹುತೇಕ ಕುಳಿತುಕೊಂಡೇ ಮಂಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಎಂ ಕಳೆದ ಮೂರು ವಾರದಿಂದ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದಾರೆ. ಫೆ.2ರಂದು ಮೊಣಕಾಲು ನೋವಿನ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿದ್ದರು. ಈ ವೇಳೆ ವೈದ್ಯರು ಎರಡು ದಿನಗಳ ಸಂಪೂರ್ಣ ವಿಶ್ರಾಂತಿಗೆ ಸಲಹೆ ನೀಡಿದ್ದರು. ಮೊಣಕಾಲಿನ ನೋವು ಗಂಭೀರ ಸ್ವರೂಪದ್ದಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಬಲ ಕಾಲಿಗೆ ಹೆಚ್ಚಿನ ಒತ್ತಡ ಬಿದ್ದಿದ್ದರಿಂದ ಮೊಣಕಾಲು ನೋವು ಉಂಟಾಗಿದೆ. ಬಲ‌ ಮೊಣಕಾಲಿನ ಮೂಳೆ ಕಟ್ಟುಗಳು ಹರಿದಿರುವುದರಿಂದ ನೋವು ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರು ಬಲ ಮೊಣಕಾಲಿಗೆ ಒತ್ತಡ ಹಾಕದಂತೆ ಸಲಹೆ ನೀಡಿದ್ದಾರೆ.ಹೀಗಾಗಿ ನಡೆದಾಡದಂತೆ ತಮ್ಮ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದು ಮಾಡಿ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ. ಸುಮಾರು ಆರು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಿಎಂಗೆ ಸೂಚನೆ ನೀಡಲಾಗಿದೆ. ಅದರಂತೆ ಫೆ.2ರಿಂದ ಮಾ.15ರ ತನಕ ಸಿಎಂ ಸಿದ್ದರಾಮಯ್ಯ ವಿಶ್ರಾಂತಿ ಪಡೆಯಬೇಕಾಗಿದೆ. ಈ ಆರು ವಾರಗಳ ಕಾಲ ಸಿದ್ದರಾಮಯ್ಯನವರು ಹೆಚ್ಚಿಗೆ ನಿಲ್ಲದಂತೆ, ನಡೆದಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ